ಬೆಳಗಾವಿ: ಎರಡು ಬಾರಿ ಚುನಾವಣೆಯಲ್ಲಿ ಸೋತರೂ ಸತತ ಪ್ರಯತ್ನ, ಹೋರಾಟದಿಂದ ಗೆದ್ದು ಮಂತ್ರಿಯಾಗಿರುವೆ. ಹಾಗಾಗಿ ಜೀವನದಲ್ಲಿ ಪ್ರತಿಯೊಬ್ಬರೂ ಹೋರಾಟದ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ನಗರದ ಕ್ಯಾಂಪ್ ಪ್ರದೇಶದಲ್ಲಿ ಸೋಮವಾರ ಸೆಂಟ್ ಪಾಲ್ ಹೈಸ್ಕೂಲ್ನ ಎಡಿ ಮೆಮೋರಿಯಲ್ ುಟ್ಬಾಲ್ ಟೂರ್ನಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ನಾನು ಸತತ ಎರಡು ಬಾರಿ ಚುನಾವಣೆಯಲ್ಲಿ ಸೋತರೂ ಸತತ ಪ್ರಯತ್ನದಿಂದ ಗೆದ್ದು, 7 ಕೋಟಿ ಜನಸಂಖ್ಯೆಯ ಕರ್ನಾಟಕದಲ್ಲಿ ಒಬ್ಬಳೇ ಮಹಿಳೆ ಮಂತ್ರಿಯಾಗಿರುವೆ. ಜೀವನದಲ್ಲಿ ಸೋಲು- ಗೆಲುವು ಸಾಮಾನ್ಯ, ಕ್ರೀಡಾ ಸ್ಫೂರ್ತಿ ಬೆಳೆಸಿಕೊಳ್ಳಬೇಕು ಎಂದರು.
ಕಳೆದ 56 ವರ್ಷಗಳಿಂದ ಈ ಟೂರ್ನಿ ನಡೆಯುತ್ತ ಬಂದಿರುವುದಕ್ಕೆ ಹೆಮ್ಮೆ ಎನಿಸುತ್ತಿದೆ. ಜತೆಗೆ 26 ತಂಡಗಳು ಈ ಟೂರ್ನಿಯಲ್ಲಿ ಭಾಗವಹಿಸುತ್ತಿರುವುದು ಖುಷಿಯ ವಿಚಾರ ಎಂದರು.
ಪ್ರಾಚಾರ್ಯ ಫಾದರ್ ಸೈಮನ್ ಫರ್ನಾಂಡೀಸ್, ಅಲುಮ್ನಿಯ ಅಧ್ಯಕ್ಷ ಡಾ. ಮಾಧವ ಪ್ರಭು, ಚಾಬ್ರಿಯಾ, ಫರೀಶ ಮುರಕುಟೆ, ಅಮಿತ್ ಪಾಟೀಲ, ಕಿರಣ ನಿಪ್ಪಾಣಿಕರ, ಆದಿತ್ಯ, ಸಮಕ್ಷ ಚಾಬ್ರಿಯಾ, ಲಿನೋರಿಯಾ ಡಿಸೋಜಾ ಇತರರಿದ್ದರು.