ಚಿತ್ರದುರ್ಗ: ಪಕ್ಷ ಸಂಘಟನೆಗೆ ಸದಸ್ಯತ್ವ ನೋಂದಣಿ ಗಂಭೀರವಾಗಿ ಪರಿಗಣಿಸುವಂತೆ ಪಕ್ಷದ ಜಿಲ್ಲಾ ಉಸ್ತುವಾರಿ, ತುರುವೇಕೆರೆ ಶಾಸಕ ಎಂ.ಟಿ. ಕೃಷ್ಣಪ್ಪ ಕಾರ್ಯಕರ್ತರಿಗೆ ಸೂಚಿಸಿದರು.
ನಗರದ ಜೆಡಿಎಸ್ ಕಚೇರಿಯಲ್ಲಿ ಮಂಗಳವಾರ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನ ಉದ್ಘಾಟಿಸಿ ಮಾತನಾಡಿ, ವಿಧಾನಸಭೆ ಚುನಾವಣೆಯ ಪರಾಜಿತ ಅಭ್ಯರ್ಥಿಗಳನ್ನು ಜತೆಯಲ್ಲಿ ಕರೆದುಕೊಂಡು ತಾಲೂಕು ಅಧ್ಯಕ್ಷರು ನೋಂದಣಿ ಮಾಡಿಸಬೇಕು ಎಂದರು.
ಮುಂಬರುವ ಚುನಾವಣೆಗಳಲ್ಲಿ ಅಭ್ಯರ್ಥಿಗಳಾಗ ಬಯಸುವವರು ತಮ್ಮ, ತಮ್ಮ ಕ್ಷೇತ್ರಗಳಲ್ಲಿ ಪಕ್ಷವನ್ನು ಸದೃಢವಾಗಿ ಬೆಳೆಸಬೇಕು. ಟಿ ಕೆಟ್ ಸಿಗದಿದ್ದರೂ ಪಕ್ಷೇತರ ಅಭ್ಯರ್ಥಿಯಾಗಿ ಗೆಲ್ಲುವ ಸಾಮರ್ಥ್ಯ ಸಾಧಿಸಬೇಕು. ಸಾಮಾನ್ಯ ಕಾರ್ಯಕರ್ತರನ್ನು ಪಕ್ಷ ಗುರುತಿಸುವಂತಾಗಬೇಕು. ಪ್ರತಿ ಗ್ರಾಮಗಳಿಗೆ ತೆರಳಿ ಗರಿಷ್ಠ ನೋಂದಣಿ ಮಾಡಿಸಬೇಕು. ಹೊರಗಿನವರ ಬದಲು ಸ್ಥಳೀಯರೇ ಗೆಲ್ಲುವಂತಾಗಬೇಕು ಎಂದು ತಿಳಿಸಿದರು.
ಭ್ರಷ್ಟ ಕಾಂಗ್ರೆಸ್ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಸುತ್ತಿರುವುದರಿಂದ ಜನಸಾಮಾನ್ಯರ ಜೀವನ ತತ್ತರಿಸುವಂತಾಗಿದೆ. ಇದರ ವಿ ರುದ್ಧ ಹೋರಾಟ ನಡೆಸಬೇಕಿದೆ. ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಅನೇಕರು ಪ್ರಾಣ ಕಳೆದುಕೊಂಡಿದ್ದಾರೆ. ಕಾಂಗ್ರೆಸ್ ಮೂರು ಭಾಗವಾಗಿ ದೆ. ಕಾರ್ಯಕರ್ತರು ಬೆಳೆಯಲು ಇದು ಸದಾವಕಾಶ ಎಂದರು.
ಮಾಜಿ ಶಾಸಕ ಎಚ್. ನಿಂಗಯ್ಯ ಮಾತನಾಡಿ ತಾಪಂ, ಜಿಪಂ ಚುನಾವಣೆಗಳು ಬರುತ್ತಿವೆ. ಕಾರ್ಯಕರ್ತರು ಬಲಿಷ್ಠವಾದಾಗ ಪಕ್ಷಕ್ಕೆ ಬೆಲೆ ಬರುತ್ತದೆ. ಜೆಡಿಎಸ್, ಬಿಜೆಪಿ ಮೈತ್ರಿಯಾಗಿದೆಯೇ ವಿನಾ ವಿಲೀನವಾಗಿಲ್ಲ. ತಾಲೂಕು ಅಧ್ಯಕ್ಷರು, ಪ್ರಮುಖ ಕಾರ್ಯಕರ್ತರು ಸಕ್ರಿಯವಾಗಿ ಸದಸ್ಯತ್ವ ನೋಂದಣಿಯಲ್ಲಿ ತೊಡಗಿಕೊಳ್ಳಬೇಕು. ಮಹಿಳೆಯರು, ಯುವಕರಿಗೆ ಆದ್ಯತೆ ನೀಡಬೇಕು ಎಂದು ತಿಳಿಸಿದರು.
ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ. ಕಾಂತರಾಜ್, ಜಿಲ್ಲಾ ಜೆಡಿಎಸ್ ಮಾಜಿ ಅಧ್ಯಕ್ಷ ಡಿ. ಯಶೋದರ ಮಾತನಾಡಿದರು. ಜಿಲ್ಲಾಧ್ಯಕ್ಷ ಜಯಣ್ಣ, ಕಾರ್ಯಾಧ್ಯಕ್ಷ ಜಿ.ಬಿ. ಶೇಖರ್, ಮಹಾ ಪ್ರಧಾನ ಕಾರ್ಯದರ್ಶಿ ಡಿ. ಗೋಪಾಲಸ್ವಾಮಿ ನಾಯಕ, ವಿಧಾನಸಭೆ ಚುನಾವಣೆ ಪರಾಜಿತ ಅಭ್ಯರ್ಥಿ ರವೀಂದ್ರಪ್ಪ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ನಸ್ರುಲ್ಲಾ, ಯುವ ಘಟಕದ ಜಿಲ್ಲಾಧ್ಯಕ್ಷ ಪ್ರತಾಪ್‌ಜೋಗಿ, ವಕೀಲ ಶಿವಶಂಕರ್, ಮಂಜುನಾಥ್, ಶಂಕರ್‌ಮೂರ್ತಿ, ಹನುಮಂತರಾಯ, ಸಣ್ಣತಿಮ್ಮಣ್ಣ, ಪರಮೇಶ್, ಗಣೇಶ್ ಮತ್ತಿತರರು ಇದ್ದರು.
ಕೋಟ್
ಚುನಾವಣೆ ಸಂದರ್ಭದಲ್ಲಿ ಪಕ್ಷದ ನಾಯಕರು ಯಾರನ್ನೂ ಮಾತನಾಡಿಸುವುದಿಲ್ಲ. ಇಲ್ಲಿ ಹೊರಗಿನವರು ಸ್ಪರ್ಧಿಸುವುದು ಬೇಸರ ತರಿಸಿದೆ. ಪಕ್ಷದಲ್ಲಿ ಕೆಲವು ಬದಲಾವಣೆಗಳಾಗಬೇಕು. ಸಂಘಟನೆಯಲ್ಲಿ ಪ್ರಾಮಾಣಿಕವಾಗಿ ತೊಡಗಿಕೊಂಡವರನ್ನು ಚುನಾವಣೆಯಲ್ಲಿ ಗಣನೆಗೆ ತೆಗೆದುಕೊಳ್ಳಬೇಕು.
ಬಿ. ಕಾಂತರಾಜ್, ರಾಜ್ಯಜೆಡಿಎಸ್ ಪ್ರಧಾನ ಕಾರ್ಯದರ್ಶಿ.