ರಾಯಚೂರು: ಕಟ್ಟಡ ಹಾಗೂ ಇತರೆ ಕಾರ್ಮಿಕರ ನೋಂದಣಿಗೆ ವಿಸಿರುವ ಷರತ್ತುಗಳನ್ನು ಸರಳೀಕರಣಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಸ್ಥಳೀಯ ಜಿಲ್ಲಾ ಕಾರ್ಮಿಕ ಇಲಾಖೆ ಕಚೇರಿ ಮುಂದೆ ಜಿಲ್ಲಾ ಕಟ್ಟಡ ಮತ್ತು ಇತರೆ ಕಾರ್ಮಿಕರ ಸಂಘಗಳ ಸಮನ್ವಯ ಸಮಿತಿಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು.
ನಂತರ ಕಾರ್ಮಿಕ ಇಲಾಖೆ ಜಿಲ್ಲಾ ಅಕಾರಿ ಆರತಿಗೆ ಮನವಿ ಸಲ್ಲಿಸಿ, ಕಟ್ಟಡ ಕಾರ್ಮಿಕರು ಬಹುತೇಕ ಅನಕ್ಷರಸ್ಥರಾಗಿದ್ದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಲು ವಿಸಿರುವ ಷರತ್ತುಗಳಿಂದ ನೋಂದಣಿ ಮಾಡಿಸಲು ಸಾಧ್ಯವಾಗುತ್ತಿಲ್ಲ ಎಂದು ದೂರಿದರು.
ಕಟ್ಟಡ ಕಾರ್ಮಿಕರು ಕಟ್ಟಡ ಪರವಾನಗಿ, ನಕ್ಷೆ, ವೇತನ ಚೀಟಿ, ಹಾಜರಾತಿ ದಾಖಲೆ ನೀಡಲು ಸಾಧ್ಯವಾಗುತ್ತಿಲ್ಲ. ಅಕಾರಿಗಳು ಕಟ್ಟಡ ನಿರ್ಮಾಣ ಸ್ಥಳಕ್ಕೆ ಭೇಟಿ ಕಾರ್ಮಿಕರು ಕೆಲಸ ಮಾಡುತ್ತಿರುವುದನ್ನು ಖಾತ್ರಿ ಪಡೆಯಬಹುದಾಗಿದೆ. ಕೂಡಲೇ ವಿಸಿರುವ ಷರತ್ತುಗಳನ್ನು ಕೈಬಿಡಬೇಕು.
ಹಾಜರಾತಿ ನಿಯಮ ಸಡಿಲಗೊಳಿಸಬೇಕು. ಕಾರ್ಮಿಕ ಕಿಟ್ ನೀಡಲು ಕರೆದಿರುವ ಟೆಂಡರ್ ರದ್ದುಗೊಳಿಸಬೇಕು. ನವೀಕರಣ ಅವಯನ್ನು ಮೂರು ವರ್ಷಕ್ಕೆ ವಿಸ್ತರಿಸಬೇಕು. ಸ್ಥಗಿತಗೊಂಡಿರುವ ಪಿಂಚಣಿ ಯೋಜನೆ ಜಾರಿಗೊಳಿಸಬೇಕು. ಶೈಕ್ಷಣಿಕ ಸಹಾಯ ಧನ ಯೋಜನೆ ಪುನರಾರಂಭಿಸಬೇಕು. ಬೋಗಸ್ ಕಾರ್ಮಿಕರಿಗೆ ಸ್ಲಂ ಬೋರ್ಡ್‌ನಿಂದ ನೀಡಲಾಗಿರುವ ಸಹಾಯಧನವನ್ನು ತನಿಖೆಗೆ ಒಳಪಡಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.