ಜಿಲ್ಲೆ

ಸದೃಢ ದೇಶ ನಿರ್ಮಾಣಕ್ಕೆ ಕೈಜೋಡಿಸಿ

ಎಸ್.ಎರ್ರಿಸ್ವಾಮಿ

ಬಳ್ಳಾರಿ ; ಲೋಕಸಭಾ ಚುನಾವಣೆಗೆ ಎಲ್ಲ ನಾಗರಿಕರು ತಪ್ಪದೇ ಮತ ಚಲಾಯಿಸುವ ಮೂಲಕ ಸದೃಢ ದೇಶ ನಿರ್ಮಾಣಕ್ಕೆ ಕೈ ಜೋಡಿಸಿ ಎಂದು ಡಿಎಚ್‌ಒ ಡಾ.ವೈ.ರಮೇಶ್ ಬಾಬು ಹೇಳಿದರು.
ಇಲ್ಲಿನ ಬಂಡಿಹಟ್ಟಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬಳಿ ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ಮತ್ತು ಜಿಲ್ಲಾ ಆರೋಗ್ಯ ಮತ್ತು ಕಲ್ಯಾಣ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಹಯೋಗದೊಂದಿಗೆ ಮಂಗಳವಾರ ನಡೆದ ಮತದಾನ ಜಾಗೃತಿ ಅಭಿಯಾನ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು. ಮತದಾನದಲ್ಲಿ ಭಾಗವಹಿಸುವುದು ಎಲ್ಲ ಮತದಾರರ ಸಾಮಾಜಿಕ ಹೊಣೆಗಾರಿಕೆಯಾಗಿದೆ. ಅರ್ಹ ಮತದಾರರು ಆಸೆ-ಆಮೀಷಗಳಿಗೆ ಒಳಗಾಗದೆ ನಿರ್ಭೀತಿಯಿಂದ ಮತ ಚಲಾವಣೆ ಮಾಡಿ ಸುಭದ್ರ ಸರ್ಕಾರ ನಿರ್ಮಿಸುವಲ್ಲಿ ಪ್ರಮುಖ ಪಾತ್ರವಹಿಸಿ ಎಂದು ತಿಳಿಸಿದರು. ಜಾಗೃತಿ ಜಾಥಾವು ಕಳೆದ ಚುನಾವಣೆಯಲ್ಲಿ ಕಡಿಮೆ ಮತದಾನವಾದ ಸ್ಥಳಗಳಲ್ಲಿ ಸಂಚರಿಸಿ ಸಾರ್ವಜನಿಕರಿಗೆ ಮತದಾನ ಕುರಿತು ಅರಿವು ಮೂಡಿಸಲಾಯಿತು.