ಹುಣಸೂರು ನಗರದ ಸರ್ಕಾರಿ ಬಾಲಕಿಯರ ಕಾಲೇಜಿನಲ್ಲಿ ಆಯೋಜಿಸಿದ್ದ ಇಂದ್ರಧನುಷ್ ಕಾರ್ಯಕ್ರಮವನ್ನು ಶಾಸಕ ಜಿ.ಡಿ.ಹರೀಶ್‌ಗೌಡ ಉದ್ಘಾಟಿಸಿದರು. ರಾಮೇಗೌಡ, ಹರವೆ ಶ್ರೀಧರ್, ಡಾ.ಎಸ್.ಕೆ.ಕೀರ್ತಿಕುಮಾರ್ ಇತರರಿದ್ದರು. 
ಜಿಲ್ಲೆ

ಸದೃಢ ಭಾರತ ನಿರ್ಮಾಣಕ್ಕೆ ಅಡಿಪಾಯ ಹಾಕಿ


ಮೈಸೂರು: ಪಾಲಕರು ತಮ್ಮ ಮಕ್ಕಳಿಗೆ ಕಾಲ ಕಾಲಕ್ಕೆ ಅಗತ್ಯ ಲಸಿಕೆ ಹಾಕಿಸುವ ಮೂಲಕ ಸದೃಢ ಭಾರತ ನಿರ್ಮಾಣಕ್ಕೆ ಅಡಿಪಾಯ ಹಾಕಬೇಕೆಂದು ಶಾಸಕ ಜಿ.ಡಿ.ಹರೀಶ್‌ಗೌಡ ತಿಳಿಸಿದರು.

ಹುಣಸೂರು ನಗರದ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಸಹಯೋಗದಲ್ಲಿ ಸೋಮವಾರ ಆಯೋಜಿಸಿದ್ದ ಇಂದ್ರಧನುಷ್ 5.0 ಅಭಿಯಾನ, ಸ್ತನ್ಯಪಾನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಭವಿಷ್ಯದ ಪ್ರಜೆಗಳಾದ ಮಕ್ಕಳನ್ನು ಸದೃಢರನ್ನಾಗಿಸಿ ಸಮಾಜಕ್ಕೆ ಕೊಡುವುದು ಪಾಲಕರ ಜವಾಬ್ದಾರಿ. ರೋಗ ಬಂದ ಮೇಲೆ ಚಿಕಿತ್ಸೆಗಿಂತ ರೋಗ ಬಾರದಂತೆ ತಡೆಗಟ್ಟುವುದೇ ಉತ್ತಮ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಗಿಂತ ಶಿಕ್ಷಣ ಇಲಾಖೆಯಲ್ಲೇ ಹೆಚ್ಚಿನ ಮಟ್ಟದ ಅರಿವು ಕಾರ್ಯಕ್ರಮ ಆಯೋಜಿಸುವ ಅಗತ್ಯವಿದೆ. ವಿದ್ಯಾರ್ಥಿನಿಯರು ತಮ್ಮ ಪಾಲಕರಿಗೆ ಈ ಕುರಿತು ಅರಿವು ಮೂಡಿಸಬೇಕೆಂದರು.

ತಾಲೂಕು ಆರೋಗ್ಯಾಧಿಕಾರಿ ಡಾ.ಎಸ್.ಕೆ.ಕೀರ್ತಿಕುಮಾರ್, ಪ್ರಾಂಶುಪಾಲ ರಾಮೇಗೌಡ, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ರಾಜೇಶ್ವರಿ, ಸಿಡಿಸಿ ಉಪಾಧ್ಯಕ್ಷ ತಟ್ಟೆಕೆರೆ ಶ್ರೀನಿವಾಸ್, ಮುಖಂಡ ಹರವೆ ಶ್ರೀಧರ್ ಇತರರು ಹಾಜರಿದ್ದರು.