ಜಿಲ್ಲೆ

ಸದ್ಭಾವನಾ ದಿನಾಚರಣೆ

ಪ್ರಸಿನ್ ಕೆ.ಆರ್

ಹಾಸನ: ನಗರದ ಸಾಲಗಾಮೆ ರಸ್ತೆ ಬಳಿ ಇರುವ ಮಲೆನಾಡು ಇಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಸದ್ಭಾವನಾ ದಿನಾಚರಣೆ ಅಂಗವಾಗಿ ಇತ್ತೀಚೆಗೆ ಪ್ರತಿಜ್ಞಾ ವಿಧಿ ಬೋಧನಾ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಮಲೆನಾಡು ಇಂಜಿನಿಯರಿಂಗ್ ಕಾಲೇಜು ಪ್ರಾಂಶುಪಾಲ ಡಾ.ಎ.ಜೆ.ಕೃಷ್ಣಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತಾನಾಡಿ, ಎಲ್ಲ ಜಾತಿ, ಧರ್ಮ, ಪ್ರದೇಶ, ಮತ ಅಥವಾ ಭಾಷೆಯ ಭೇದ ಭಾವವಿಲ್ಲದೆ ಭಾರತದ ಎಲ್ಲರೂ ಭಾವೈಕ್ಯ ಮತ್ತು ಸೌಹಾದಕ್ಕಾಗಿ ಹಿಂಸಾಚಾರ ತ್ಯಜಿಸಿ ಸದ್ಭಾವನೆ ಮೂಡಿಸುವ ಕೆಲಸ ಆಗಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕಾಲೇಜು ರಿಜಿಸ್ಟ್ರಾರ್ ಕುಮುದಾ, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿ ಡಾ.ಇಂದ್ರ ಬಹಾದ್ದೂರ್ ಇತರರು ಇದ್ದರು.