ಜಿಲ್ಲೆ

ಸದ್ವಿದ್ಯಾ ಕಾಲೇಜಿನಲ್ಲಿ ಪರಿಸರ ದಿನಾಚರಣೆ

ಆರ್.ಕೃಷ್ಣ

ಮೈಸೂರು: ನಗರದ ನಾರಾಯಣಶಾಸ್ತ್ರಿ ರಸ್ತೆಯಲ್ಲಿರುವ ಸದ್ವಿದ್ಯಾ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ಪರಿಸರ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು.
ಸಂಸ್ಥೆಯ ಅಧ್ಯಕ್ಷ ಪ್ರೊ.ವಿ.ಕೆ. ಗೋಪಾಲಾಚಾರ್ ಮಾತನಾಡಿ, ಪರಿಸರ ದಿನಾಚರಣೆಯು ಕೇವಲ ಘೋಷಣೆಯಾಗದೆ ಅನುಸರಣೆಯಾಗಬೇಕು. ಗಿಡಮರಗಳನ್ನು ಪೋಷಣೆ ಮಾಡಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಶಾಲೆಯ ಆವರಣದಲ್ಲಿ ಸಾಲುಮರದ ತಿಮ್ಮಕ್ಕ ತಾರಸಿ ತೋಟವನ್ನು ಉದ್ಘಾಟಿಸಿ ಮಾತನಾಡಿದ ಗೌರವ ಕಾರ್ಯದರ್ಶಿ ಪ್ರೊ. ಎಂ.ಎಸ್.ಕೆ ನರಹರಿಬಾಬು ಅವರು ಪರಿಸರ ಸಂರಕ್ಷಣೆಯಲ್ಲಿ ಯುವಕರ ಪಾತ್ರವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.
ಉಪಾಧ್ಯಕ್ಷ ಸಿ.ಆರ್. ನಾಗರಾಜ್, ಜಂಟಿ ಕಾರ್ಯದರ್ಶಿ ಪ್ರೊ.ಹಿರಿಯಣ್ಣ, ಪ್ರಾಂಶುಪಾಲ ವೈ.ಆರ್.ರಮೇಶ, ಉಪಪ್ರಾಂಶುಪಾಲೆ ಜಿ.ಕೆ. ಇಂದುಮತಿ ಇತರರು ಇದ್ದರು.
ತ್ಯಾಜ್ಯ ವಸ್ತುಗಳಿಂದ ವಿವಿಧ ಮಾದರಿಗಳ ತಯಾರಿಕೆ, ಪರಿಸರ ಸಂರಕ್ಷಣೆಯ ಪ್ರತಿಜ್ಞಾವಿಧಿ, ಭಾಷಣ ಹಾಗೂ ಶ್ರಮದಾನ ಮುಂತಾದ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಪರಿಸರ ಕಾಳಜಿಯನ್ನು ಕುರಿತ ಸೆಲ್ಫಿ ಜೋನ್ ಆಕರ್ಷಕವಾಗಿತ್ತು, ಪರಿಸರ ವ್ಯವಸ್ಥೆಯ ಪುನಃಸ್ಥಾಪನೆ ಎಂಬ ಧ್ಯೇಯ ವಾಕ್ಯದೊಂದಿಗೆ ನಡೆದ ಈ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.