ಬೇಲೂರು: ಸನ್ಯಾಸಿಹಳ್ಳಿ ಗ್ರಾಮ ಪಂಚಾಯಿತಿಗೆ ಅಧ್ಯಕ್ಷರಾಗಿ ಎಸ್.ಟಿ.ರಮೇಶ್, ಉಪಾಧ್ಯಕ್ಷರಾಗಿ ಪಾರ್ವತಮ್ಮ ಅವಿರೋಧವಾಗಿ ಸೋಮವಾರ ಆಯ್ಕೆಯಾದರು.
ಬೇಲೂರು ತಾಲೂಕಿನ ಸನ್ಯಾಸಿಹಳ್ಳಿ ಗ್ರಾಪಂ ಅಧ್ಯಕ್ಷ ಸ್ಥಾನವು ಸಾಮಾನ್ಯ ವರ್ಗ, ಉಪಾಧ್ಯಕ್ಷ ಸ್ಥಾನವು ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ಎಸ್.ಟಿ.ರಮೇಶ್, ಉಪಾಧ್ಯಕ್ಷ ಸ್ಥಾನಕ್ಕೆ ಪಾರ್ವತಮ್ಮ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿಯಾಗಿದ್ದ ಮೀನುಗಾರಿಕಾ ಇಲಾಖೆ ಸಹಾಯಕ ನಿರ್ದೇಶಕ ರವಿ ಕಿರಣ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಿದರು.
ಗ್ರಾಮಸ್ಥರಾದ ಎಸ್.ಎಂ.ಹೊನ್ನಪ್ಪ, ದೇವರಾಜ್, ಎಸ್.ಎಂ.ರಾಜು, ಶಾಂತೇಗೌಡ, ನರೇಂದ್ರ, ಕುಮಾರ್, ವಾಸು, ಶಿವೇಗೌಡ, ಮೋಹನ್ ಕುಮಾರ್, ಜಯರಂಗೇಗೌಡ, ಸದಸ್ಯರು ಇದ್ದರು.