ಯಾದಗಿರಿ: ಜೆಡಿಎಸ್-ಬಿಜೆಪಿ ಮೈತ್ರಿಯಾದ ಹಿನ್ನೆಲೆಯಲ್ಲಿ ಪಕ್ಷದ ಕೆಲ ಹಾಲಿ ಹಾಗೂ ಮಾಜಿ ಶಾಸಕರು ಮಂಗಳವಾರ ಬೆಂಗಳೂರಿನಲ್ಲಿ ಸಭೆ ಸೇರುತ್ತಿದ್ದಾರೆ ಎನ್ನಲಾಗಿದ್ದು ತಮಗೆ ಇದುವರೆಗೂ ಯಾವುದೇ ಮಾಹಿತಿ ಬಂದಿಲ್ಲ ಎಂದು ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಸ್ಪಷ್ಟಪಡಿಸಿದರು.
ಮುಂದಿನ ಲೋಕಸಭೆ ಚುನಾವಣೆ ದೃಷ್ಟಿಯಲ್ಲಿಟ್ಟಕೊಂಡು ನಮ್ಮ ನಾಯಕರು ಈಗಾಗಲೇ ಬಿಜೆಪಿ ಹೈಕಮಾಂಡ್ ಜತೆ ಮೈತ್ರಿಗೆ ಅಂತಿಮ ಮುದ್ರೆ ಒತ್ತಿದ್ದಾರೆ. ಇದೇ ನಿಧರ್ಾರ ವಿಧಾನಸಭೆ ಚುನಾವಣೆಗೂ ಮುನ್ನ ಮಾಡಿದ್ದರೆ ರಾಜ್ಯದಲ್ಲಿ ಜೆಡಿಎಸ್, ಬಿಜೆಪಿ ಸಮ್ಮ್ಮಿಶ್ರ ಸಕರ್ಾರ ಅಧಿಕಾರದಲ್ಲಿರುತ್ತಿತ್ತು ಎಂಬುದು ಪಕ್ಷದ ಕಾರ್ಯಕರ್ತರ ಅನಿಸಿಕೆಯಾಗಿದೆ. ಈ ವಿಷಯದ ಬಗ್ಗೆ ಚಚರ್ೆ ಮಾಡಲು ಪಕ್ಷದ ಹಾಲಿ ಮತ್ತು ಮಾಜಿ ಶಾಸಕರು ಸಭೆ ಸೇರುತ್ತಿರಬಹುದು. ಒಂದು ವೇಳೆ ನನಗೂ ಆಹ್ವಾನ ಬಂದರೆ ಹೋಗುತ್ತೇನೆ ಎಂದು ಸೋಮವಾರ ನಗರದಲ್ಲಿ ತಮ್ಮನ್ನು ಭೇಟಿ ಮಾಡಿದ ಪತ್ರಕರ್ತರಿಗೆ ವಿವರಿಸಿದರು.
ಮೈತ್ರಿ ವಿರೋಧಿಸಿ ಯಾರೂ ಸಭೆ ನಡೆಸುತ್ತಿಲ್ಲ. ಆದರೆ ಬಿಜೆಪಿಯ ಈ ಸಖ್ಯ ಸುದೀರ್ಘವಾಗಿದ್ದರೆ, ಮುಂದಿನ ನಮ್ಮ ರಾಜಕೀಯ ಭವಿಷ್ಯದ ಬಗ್ಗೆ ನಾಯಕರಾದ ಎಚ್.ಡಿ.ಕುಮಾರಸ್ವಾಮಿ ಅವರು ಸ್ಪಷ್ಟ ಭರವಸೆ ನೀಡಬೇಕು ಎಂಬುದು ನಮ್ಮೆಲ್ಲರ ನಿರೀಕ್ಷೆಯಾಗಿದೆ. ಹಿಂದೆ ಚುನಾವಣೆಯಲ್ಲಿ ರಾಜ್ಯದ ಕೆಲ ಕ್ಷೇತ್ರಗಳಲ್ಲಿ ಜೆಡಿಎಸ್ ಎರಡನೇ ಸ್ಥಾನದಲ್ಲಿದೆ. ಕೆಲವೆಡೆ ಬಿಜೆಪಿ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ. ಹೀಗಾಗಿ ಬರುವ ದಿನಗಳಲ್ಲಿ ಬಿಬಿಎಂಪಿ ಮತ್ತು ತಾಪಂ, ಜಿಪಂ ಚುನಾವಣೆ ಬರುತ್ತವೆ. ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡು ಹೋಗುವ ಬಗ್ಗೆ ಸ್ಪಷ್ಟತೆ ಬೇಕಿದೆ ಎಂದರು.