ತಿ.ನರಸೀಪುರ: ಜಾತಿ-ಧರ್ಮದ ಬೇಧವಿಲ್ಲದೆ ಸಮಾನತೆಯ ಸಮಾಜ ನಿರ್ಮಿಸಲು ಹೋರಾಡಿದ ಬಸವಣ್ಣನ ತತ್ವಗಳು ಇಂದಿಗೂ ಪ್ರಸ್ತುತ. ಅವರು ನೀಡಿದ ಸಂದೇಶಗಳು ನಾವು ವಿಶ್ವಭ್ರಾತೃತ್ವದೆಡೆಗೆ ನಡೆಯಲು ದಿಕ್ಕು ತೋರಿಸುತ್ತವೆ ಎಂದು ಅರೆ ಬೊಮ್ಮನಹಳ್ಳಿ ಪಾರಮಾರ್ಥ ಮಠದ ಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು.
ತಾಲೂಕಿನ ಹಲವಾರ ಗ್ರಾಮದಲ್ಲಿ ಶನಿವಾರ ಶ್ರೀಬಸವೇಶ್ವರ ಗೆಳೆಯರ ಬಳಗದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಬಸವೇಶ್ವರರ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಿ ಮಾತನಾಡಿದರು. 12ನೇ ಶತಮಾನದಲ್ಲಿ ಸಾಮಾಜಿಕ ಅಸಮಾನತೆ, ಜಾತಿ ವ್ಯವಸ್ಥೆ ಸೇರಿದಂತೆ ಹಲವು ಅನಿಷ್ಠ ಪದ್ಧತಿಗಳು ಆಚರಣೆಯಲ್ಲಿದ್ದ ಕಾಲದಲ್ಲಿ ತಮ್ಮ ಸರಳ ವಚನಗಳ ಮೂಲಕ ಸಮಾಜದಲ್ಲಿ ಸುಧಾರಣೆಗಳನ್ನು ತಂದವರು ಬಸವಣ್ಣ. ಕಾಯಕವೇ ಕೈಲಾಸ ಎಂದು ಕಲಿಸಿಕೊಟ್ಟ ವಿಶ್ವ ಗುರು ಬಸವಣ್ಣ. ಅವರ ತತ್ವ, ಆದರ್ಶಗಳು, ಚಿಂತನೆಗಳು ಇಂದಿಗೂ ನಮಗೆಲ್ಲರಿಗೂ ಪಾಠ, ಬದುಕಿಗೆ ದಾರಿಯಾಗಿದೆ ಎಂದು ಹೇಳಿದರು.
ತಮ್ಮ ವಚನಗಳ ಮೂಲಕವೇ 12ನೇ ಶತಮಾನದಲ್ಲಿ ಜ್ಞಾನದ ಬೆಳಕು ಚೆಲ್ಲಿ ಕ್ರಾಂತಿಯ ಬೀಜ ಬಿತ್ತಿದವರು ಬಸವಣ್ಣ. ಪ್ರಸಿದ್ಧ ಸಂತರಾಗಿದ್ದ ಇವರು ರಾಜನೀತಿಜ್ಞರಾಗಿ, ಸಮಾಜ ಸುಧಾರಕರಾಗಿ ತಮ್ಮ ಕಾವ್ಯ ಮತ್ತು ಬರವಣಿಗೆಯ ಮೂಲಕ ಸಮಾಜದಲ್ಲಿ ಹಲವಾರು ಸುಧಾರಣೆಗಳನ್ನು ತಂದರು. ಕಾಯಕವೇ ಕೈಲಾಸ ಎಂದು ಮನುಕುಲಕ್ಕೆ ಪಾಠ ಕಲಿಸಿಕೊಟ್ಟ ವಿಶ್ವ ಬಸವಣ್ಣನವರ ತತ್ವ, ಆದರ್ಶಗಳು, ಚಿಂತನೆಗಳು ಇಂದಿಗೂ ನಮಗೆಲ್ಲರಿಗೂ ಪಾಠ, ಬದುಕಿಗೆ ದಾರಿಯಾಗಿದೆ ಎಂದರು.
ಎಂ.ಎಲ್ ಹುಂಡಿ ಮಠದ ಗೌರಿಶಂಕರ ಸ್ವಾಮೀಜಿ ಮಾತನಾಡಿ, ಜನ ಸಮುದಾಯಕ್ಕೆ ಬಸವಣ್ಣನವರ ತತ್ವ ಸಿದ್ಧಾಂತ ಹಾಗೂ ಆದರ್ಶಗಳು ಅರ್ಥವಾಗಿರುವುದರಿಂದ ಪ್ರತಿಯೊಂದು ಗ್ರಾಮಗಳಲ್ಲೂ ಬಸವ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸುತ್ತಿದ್ದಾರೆ.
ಕಳ್ಳೀಪುರ ಮಠದ ಗುರುಪಾದ ಶಿವಾಚಾರ್ಯ ಸ್ವಾಮೀಜಿ, ನರಗ್ಯಾತನಹಳ್ಳಿ ಮಠದ ಶಿವಕುಮಾರ ಸ್ವಾಮೀಜಿ, ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷ ಸಿ.ಎಂ. ಪ್ರಕಾಶ್, ಬಸವ ಕೇಂದ್ರದ ಅಧ್ಯಕ್ಷ ಪರಮೇಶ್ ಪಟೇಲ್, ಶ್ರೀ ಬಸವೇಶ್ವರ ಸೌಹಾರ್ದ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಸ್.ಬಿ.ಸುಗಂಧರಾಜು, ವಕೀಲ ಪರಮೇಶ್, ಕೆಇಬಿ ಸಿದ್ದಲಿಂಗಸ್ವಾಮಿ, ಪ್ರಕಾಶ್, ತೊಂಟೇಶ್, ಶೇಖರಪ್ಪ, ಮಹದೇವಸ್ವಾಮಿ, ಕೃಷಿಕ ಸಮಾಜದ ಅಧ್ಯಕ್ಷ ಬಿ.ಎಂ.ಶಿವಮಲ್ಲಪ್ಪ, ಜಾಗತಿಕ ಲಿಂಗಾಯತ ಮಹಾಸಭಾ ಅಧ್ಯಕ್ಷ ರವಿ ತೊಟ್ಟವಾಡಿ, ವಕೀಲರ ಸಂಘದ ಅಧ್ಯಕ್ಷ ತೊಟ್ಟವಾಡಿ ಮಹದೇವಸ್ವಾಮಿ, ದೊಡ್ಡನಹುಂಡಿ ಜಿ. ನಂಜುಂಡಸ್ವಾಮಿ, ಕಾವೇರಿ ನೀರಾವರಿ ನಿಗಮದ ಎ ಇ ಇ ಎಚ್.ಸಿ.ರತೀಶ್, ಮುಖಂಡರಾದ ಚಂದ್ರಧರ, ಶಿವಕುಮಾರ ಸ್ವಾಮಿ, ಹೋಟೆಲ್ ರಾಜಣ್ಣ, ಜಗದೀಶ್, ಚಿದರಹಳ್ಳಿ ನವೀನ್, ಉಪನ್ಯಾಸಕ ಮಹದೇವಸ್ವಾಮಿ, ಪಟೇಲ್ ಮರಿಸ್ವಾಮಿ, ಮಲ್ಲಿಕಾರ್ಜುನಸ್ವಾಮಿ, ಪಟೇಲ್ ಗಿರೀಶ್, ಪಟೇಲ್ ಮಹದೇವಸ್ವಾಮಿ, ಪಿ.ಮಹೇಶ್ , ಪಾಲಾಕ್ಷ, ನರಗ್ಯಾತನಹಳ್ಳಿ ಕುಮಾರಸ್ವಾಮಿ ಹಾಗೂ ಇತರರು ಇದ್ದರು.