ಬೆಳಗೋಡು ಗ್ರಾಮದಲ್ಲಿ ಕುಡಿಯುವ ನೀರಿನ ಘಟಕ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಎಚ್.ಕೆ ಕುಮಾರಸ್ವಾಮಿ. ಈ ವೇಳೆ ಜಿಪಂ ಮಾಜಿ ಸದಸ್ಯೆ ಚಂಚಲಾಕುಮಾರಸ್ವಾಮಿ, ಜೆಡಿಎಸ್ ತಾಲೂಕು ಅಧ್ಯಕ್ಷ ಕೆ.ಎಲ್ ಸೋಮಶೇಖರ್ ಮುಂತಾದವರಿದ್ದರು. 
ಜಿಲ್ಲೆ

ಸಮಗ್ರ ಅಭಿವೃದ್ಧಿ ಮಾಡುವ ಗುರಿ: ಶಾಸಕ ಎಚ್.ಕೆ.ಕುಮಾರಸ್ವಾಮಿ

ಸಕಲೇಶಪುರ: ತಾಲೂಕಿನ ಬೆಳಗೋಡು ಹೋಬಳಿಯನ್ನು ಸಮಗ್ರ ಅಭಿವೃದ್ಧಿಗೊಳಿಸುವ ಮೂಲಕ ಮಾದರಿ ಹೋಬಳಿಯನ್ನಾಗಿ ರೂಪಿಸುವ ಗುರಿ ಹೊಂದಲಾಗಿದೆ ಎಂದು ಶಾಸಕ ಎಚ್.ಕೆ.ಕುಮಾರಸ್ವಾಮಿ ಹೇಳಿದರು.

ಸೋಮವಾರ ಬೆಳಗೋಡು ಗ್ರಾಮದಲ್ಲಿ ಸುಮಾರು 40 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಪಶು ಆಸ್ಪತ್ರೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿ, ಹೆಚ್ಚಿನ ಸಂಖ್ಯೆಯಲ್ಲಿ ಕೂಲಿ ಕಾರ್ಮಿಕರೆ ಇರುವ ಹೋಬಳಿಯಲ್ಲಿ ಸಾಕಷ್ಟು ಮೂಲಸೌಲಭ್ಯಗಳ ಕೊರತೆ ಇದ್ದು, ಹಂತ ಹಂತವಾಗಿ ಅಭಿವೃದ್ಧಿಗೊಳಿಸಲಾಗುತ್ತಿದೆ ಎಂದರು.

ಈಗಾಗಲೇ ಎತ್ತಿನಹೊಳೆ ಯೋಜನೆ ಮೂಲಕ ಹೋಬಳಿಯ ಪ್ರಮುಖ ರಸ್ತೆಗಳು ಅಭಿವೃದ್ಧಿಗೊಂಡಿದ್ದು, ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಅನುದಾನದ ಕೊರತೆ ಎದುರಾಗಿದೆ. ಹೋಬಳಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ನೀಗಿದ್ದು, ಸ್ಮಶಾನದ ಸಮಸ್ಯೆ ಬಗೆಹರಿದಿದೆ ಎಂದರು.

ಕಾರ್ಯಕ್ರಮದ ನಂತರ ಗ್ರಾಮದಲ್ಲಿ 15 ಲಕ್ಷ ರೂ. ವೆಚ್ಚದ ಕುಡಿಯುವ ನೀರಿನ ಘಟಕ ನಿರ್ಮಾಣಕ್ಕೆ ಹಾಗೂ ಗೊಳಗಂಡೆ ಗ್ರಾಮದಲ್ಲಿ ಕಾಂಕ್ರಿಟ್ ರಸ್ತೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದರು. ಈ ವೇಳೆ ಜಿಪಂ ಮಾಜಿ ಸದಸ್ಯೆ ಚಂಚಲಾ ಕುಮಾರಸ್ವಾಮಿ, ಜೆಡಿಎಸ್ ತಾಲೂಕು ಅಧ್ಯಕ್ಷ ಕೆ.ಎಲ್.ಸೋಮಶೇಖರ್ ಮುಂತಾದವರಿದ್ದರು.