ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ನಗರದ ಬಸವೇಶ್ವರ ವೃತ್ತದಲ್ಲಿ ಶನಿವಾರ ವಿಜಯೋತ್ಸವ ಆಚರಿಸಲಾಯಿತು. ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಜಿ.ನಂಜಯ್ಯನಮಠ, ಶಾಸಕ ಎಚ್.ವೈ.ಮೇಟಿ, ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷ ನಾಗರಾಜ ಹದ್ಲಿ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ರಕ್ಷಿತಾ ಈಟಿ, ಬ್ಲಾಕ್ ಅಧ್ಯಕ್ಷೆ ಅಬ್ದುಲರಜಾಕ ಬೆಣ್ಣೂರ, ಎಸ್.ಎನ್.ರಾಂಪುರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಬಳ್ಳಾರಿ ಇತರರು ಇದ್ದರು. 
ಜಿಲ್ಲೆ

ಸಮಗ್ರ ಅಭಿವೃದ್ಧಿಗೆ ಸಿಕ್ಕ ಗೆಲವು

ಬಾಗಲಕೋಟೆ: ವಿಧಾನಸಭಾ ಉಪಚುನಾವಣೆಯಲ್ಲಿ ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟಣದ ಕಾಂಗ್ರೆಸ್ ಪಕ್ಷದ ಭರ್ಜರಿ ಗೆಲವು ನಿಮಿತ್ತ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ನಗರದ ಬಸವೇಶ್ವರ ವೃತ್ತದಲ್ಲಿ ಶನಿವಾರ ವಿಜಯೋತ್ಸವ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಜಿ.ನಂಜಯ್ಯನಮಠ ಮಾತನಾಡಿ, ವಿಪಕ್ಷಗಳ ನಿರಂತರ ಅಪಪ್ರಚಾರ, ಸುಳ್ಳು ಆರೋಪಗಳನ್ನು ಮೆಟ್ಟಿನಿಂತು ನಾವು ಸಾಽಸಿರುವ ಈ ಗೆಲುವು ದಿಗ್ವಿಜಯವಾಗಿ ಕಾಣುತ್ತಿದೆ. ಈ ಗೆಲುವಿನ ಹಿಂದಿರುವ ನಮ್ಮ ಕಾರ್ಯಕರ್ತರು ಮತ್ತು ಮುಖಂಡರ ಅಪಾರ ಶ್ರಮ ಕಾರಣ ಎಂದರು.

ಶಾಸಕ ಎಚ್.ವೈ.ಮೇಟಿ ಮಾತನಾಡಿ, ಈ ಗೆಲುವು ನಮ್ಮ ಸರ್ಕಾರದ ಮೇಲಿನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ. ಜನರಿಗಾಗಿ ದುಡಿಯುವ ನಮ್ಮ ಸಂಕಲ್ಪಕ್ಕೆ ಚುನಾವಣಾ ಫಲಿತಾಂಶ ಇನ್ನಷ್ಟು ಬಲ ತುಂಬಿದೆ. ಕರ್ನಾಟಕ ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳ ಗೆಲುವು, ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ, ಹಳೆಯ ಮೈಸೂರು ಭಾಗ ಮತ್ತು ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಜನ ಆಶೀರ್ವಾದ ಮಾಡಿದ್ದಾರೆ ಎಂದು ತಿಳಿಸಿದರು.

ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷ ನಾಗರಾಜ ಹದ್ಲಿ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ರಕ್ಷಿತಾ ಈಟಿ, ಬ್ಲಾಕ್ ಅಧ್ಯಕ್ಷೆ ಅಬ್ದುಲರಜಾಕ ಬೆಣ್ಣೂರ, ಎಸ್.ಎನ್.ರಾಂಪುರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಬಳ್ಳಾರಿ, ಹನಮಂತ ರಾಕುಂಪಿ, ಮುಖಂಡರಾದ ನಿಂಗನಗೌಡ ಪಾಟೀಲ, ದ್ಯಾಮಣ್ಣ ಗಾಳಿ, ಮಲ್ಲಿಕಾರ್ಜುನ ಶಿರೂರ, ವಿಜಯ ಕಮತಗಿ, ಅಕ್ಬರ ಮುಲ್ಲಾ, ಹನಮಂತ ಭಜಂತ್ರಿ, ಮಂಜುಳಾ ಭೂಸಾರೇ, ರೇಣುಕಾ ನ್ಯಾಮಗೌಡ, ಅಲ್ತಾಫ ಯಾದವಾಡ, ಮಲ್ಲು ಜಕಾತಿ, ಪ್ರೇಮಾ ರಾಠೋಡ, ರೇಣುಕಾ ನಾರಾಯಣಕರ, ನಾಗಮಲ್ಲೇಶ್ವರಿ, ನಿಡೋಣಿ ಬಾಯಿ ಇತರರು ಇದ್ದರು.