ಜಿಲ್ಲೆ

ಸಮರ್ಪಕ ಬಸ್ ಸೌಲಭ್ಯಕ್ಕೆ ಆಗ್ರಹ

ಕಲಬುರಗಿ: ಗ್ರಾಮೀಣ ಭಾಗದಲ್ಲಿ ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ ಸೌಲಭ್ಯ ಇಲ್ಲದೆ ಶಿಕ್ಷಣದಿಂದ ವಂಚಿತರಾಗುತ್ತಿದ್ದು, ನಿತ್ಯ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಆದ್ದರಿಂದ ಸಮಯಕ್ಕೆ ಸರಿಯಾಗಿ ಬಸ್ ನೀಡಬೇಕು, ಬಸ್‌ಗಳ ಸಂಖ್ಯೆ ಹೆಚ್ಚಿಸಬೇಕು, ಬಸ್ ಪಾಸ್ ವಿತರಿಸಬೇಕು ಎಂದು ಆಗ್ರಹಿಸಿ ನಗರದ ರಾಮ ಮಂದಿರ ವೃತ್ತದಲ್ಲಿ ಬುಧವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಎಬಿವಿಪಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರಾದ ಹನುಮಂತ ಬಗಲಿ ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಶಿಕ್ಷಣಕ್ಕಾಗಿ ನಗರ ಪ್ರದೇಶದ ಶಾಲೆ, ಕಾಲೇಜಿಗೆ ಬರುತ್ತಾರೆ. ತರಗತಿ ಪ್ರಾರಂಭವಾದ ನಂತರ ಬಸ್ ಪಾಸ್ ವಿತರಿಸದೆ, ಶೀಘ್ರ ವಿತರಣೆ ಮಾಡಬೇಕು. ಪಾಸ್ ವಿತರಣೆಗೆ ಹೆಚ್ಚಿನ ಸಿಬ್ಬಂದಿಯನ್ನು ಒದಗಿಸಬೇಕು. ಅರ್ಜಿ ಸಲ್ಲಿಸಿದ ನಂತರ ವಿದ್ಯಾರ್ಥಿಗಳು ವಾರಗಳ ಕಾಲ ಬಸ್ ಪಾಸ್ ಪಡೆಯುವ ಸ್ಥಿತಿ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ರಾಜ್ಯದಲ್ಲಿ ವಿಶ್ವವಿದ್ಯಾಲಯಗಳ ಶೈಕ್ಷಣಿಕ ವೇಳಾಪಟ್ಟಿ ಬದಲಾವಣೆಯಿದ್ದು, ಆಯೋಗ ವಿಶ್ವವಿದ್ಯಾಲಯಗಳ ಶೈP್ಷÀಣಿಕ ವೇಳಾಪಟ್ಟಿಗೆ ಅನುಗುಣವಾಗಿ ವಿದ್ಯಾರ್ಥಿಗಳಿಗೆ ಬಸ್ ಪಾಸ್ ವಿತರಿಸಬೇಕು ಎಂದು ಆಗ್ರಹಿಸಿದರು.

ರಾಜ್ಯ ರಾಜ್ಯ ಸರ್ಕಾರ ಸ್ತ್ರೀ ಶಕ್ತಿ ಯೋಜನೆ ಜಾರಿ ಮಾಡಿದ ಪರಿಣಾಮ ಅತಿ ಹೆಚ್ಚು ಮಹಿಳೆಯರು ಬಸ್‌ಗಳಲ್ಲಿ ಪ್ರಯಾಣಿಸುತ್ತಿದ್ದಾರೆ. ಬಸ್‌ಗಳ ಸಂಖ್ಯೆ ಹೆಚ್ಚಿಸದೆ ಇರುವುದರಿಂದ ವಿದ್ಯಾರ್ಥಿಗಳ ಪ್ರಯಾಣ ಕಷ್ಟಕರವಾಗಿದೆ. ಅಪಾಯದ ಪ್ರಯಾಣ ಮಾಡುತ್ತಿದ್ದಾರೆ. ಆದ್ದರಿಂದ ಸರ್ಕಾರಿ ಬಸ್‌ಗಳ ಸಂಖ್ಯೆ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.

ಪ್ರಾಂತ ಸಹ ಸಂಘಟನಾ ಕಾರ್ಯದರ್ಶಿ ಗಂಗಾಧರ ಹಂಜಗಿ, ವಿಭಾಗ ಸಂಘಟನಾ ಕಾರ್ಯದರ್ಶಿ ಪಾಂಡು ಮೋರೆ, ಜಿ¯್ಲÁ ಸಂಚಾಲಕ ಮಂಜುನಾಥ, ತಾಲೂಕು ಸಂಚಾಲಕ ಮನೋಜ ಕುಮಾರ, ನಗರ ಕಾರ್ಯದರ್ಶಿ ಶಾಂತಕುಮಾರ, ಶಿವಾನಿ, ಅರುಣಾ, ರಕ್ಷಿತಾ, ತರುಣ, ಗುರು, ತಾಯಪ್ಪ, ಶರಣ, ಮುತ್ತು ಇತರರಿದ್ದರು.