ಜಿಲ್ಲೆ

ಸಮಸಮಾಜ ನಿರ್ಮಾಣಕ್ಕೆ ಶ್ರಮಿಸಿದ ಅಂಬೇಡ್ಕರ್

ಚಾಮರಾಜನಗರ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಸಮಸಮಾಜ ನಿರ್ಮಾಣಕ್ಕೆ ಶ್ರಮಿಸಿದರು ಎಂದು ಯುವ ಮುಖಂಡ ಕುಮಾರ್ ಚಿಕ್ಕಹೊಳೆ ತಿಳಿಸಿದರು.

ತಾಲೂಕಿನ ಚಿಕ್ಕಹೊಳೆ ಗ್ರಾಮದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಸಂವಿಧಾನ ಶಿಲ್ಪಿ, ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ 134 ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು ಈ ದೇಶ ಕಂಡ ಮಹಾ ಮಾನವತವಾದಿಯಾಗಿದ್ದಾರೆ. ಅವರು ಸಂವಿಧಾನವನ್ನು ರಚನೆ ಮಾಡುವ ಮೂಲಕ ಸಮ ಸಮಾಜ ನಿರ್ಮಾಣಕ್ಕಾಗಿ ತಮ್ಮ ಜೀವನವನ್ನೇ ತ್ಯಾಗ ಮಾಡಿದರು. ಮತದಾನದ ಹಕ್ಕು ನೀಡುವ ಮೂಲಕ ರಾಜಕೀಯ ಅಧಿಕಾರವನ್ನು ಕಲ್ಪಿಸಿಕೊಟ್ಟರು. ಮಹಿಳೆಯರಿಗೆ ಸಮಾನ ಅವಕಾಶಗಳನ್ನು ಕಲ್ಪಿಸಿದರು. ಅವರ ತತ್ವ-ಆದರ್ಶಗಳನ್ನು ನಾವೆಲ್ಲರೂ ಅಳವಡಿಸಿಕೊಂಡು ಮುನ್ನಡೆಯಬೇಕಿದೆ ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷ ಚೆನ್ನಂಜಪ್ಪ, ಸದಸ್ಯರಾದ ಮೂರ್ತಿ, ಮಂಜು, ಪ್ರಶಾಂತ್, ಯಜಮಾನರಾದ ತಿಮ್ಮೆಗೌಡ, ಮುಖಂಡರಾದ ಆತಾವುಲ್ಲಾ, ಮಹಾದೇವ, ರಾಮಸ್ವಾಮಿ, ಕರುಪ್ಪುಸ್ವಾಮಿ, ಷಣ್ಮುಗಂ, ರವಿ ಕುಮಾರ್, ವೇಳಾಯುಧ ಹಾಗೂ ಇತರರು ಉಪಸ್ಥಿತರಿದ್ದರು.