ಮೂಡಲಗಿ: ಸಮಾಜಮುಖಿ ಕಾರ್ಯ ಮಾಡುವಲ್ಲಿ ಸಂಘ ಸಂಸ್ಥೆಗಳ ಮತ್ತು ಪ್ರತಿಷ್ಠಾನಗಳ ಪಾತ್ರ ಮಹತ್ವದ್ದಾಗಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ತಾಲೂಕಿನ ಅರಭಾವಿಯ ಬಸವೇಶ್ವರ ಸಭಾ ಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿ, ಎಲ್ಲ ಕಾರ್ಯಗಳನ್ನು ಸರ್ಕಾರದಿಂದ ಮಾಡಲು ಆಗುವುದಿಲ್ಲ. ಸಂಘಸಂಸ್ಥೆಗಳು ಮತ್ತು ಪ್ರತಿಷ್ಠಾನಗಳು ಸಮಾಜ ಸೇವೆ ಮಾಡುವ ಮೂಲಕ ಸಮಾಜಕ್ಕೆ ನೆರವಾಗಬೇಕು. ಉತ್ತಮ ಸೇವೆ ಸಲ್ಲಿಸಿದ ಶಿಕ್ಷಕರನ್ನು ಗುರುತಿಸಿ ಪ್ರತಿಷ್ಠಾನದಿಂದ ಪ್ರಶಸ್ತಿ ನೀಡುತ್ತಿರುವುದು ಶ್ಲಾಘನೀಯ.
ದಿ.ಬಾಳಪ್ಪ ಹೊಸಮನಿ ಅವರು ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದು ಅವರ ಬಳಿ ಕಲಿತ ವಿದ್ಯಾರ್ಥಿಗಳು ವಿವಿಧ ಕ್ಷೇತ್ರದಲ್ಲಿ ಉನ್ನತ ಸ್ಥಾನದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕಳೆದ ಎಂಟು ವರ್ಷಗಳಿಂದ ಉತ್ತಮ ಕಾರ್ಯ ಮಾಡುತ್ತಿದ್ದು, ಉತ್ತುಂಗಕ್ಕೇರಲಿ ಎಂದು ಶುಭ ಹಾರೈಸಿದರು.
ಅಧ್ಯಕ್ಷ ಪರಮೇಶ್ವರ ಹೊಸಮನಿ, ಶಂಕರ ಬಿಲಕುಂದಿ, ವಿಠ್ಠಲ ಸವದತ್ತಿ, ಡಾ.ರಾಜೇಂದ್ರ ಸಣ್ಣಕ್ಕಿ, ಮಾಲತೇಶ ಸಣ್ಣಕ್ಕಿ, ಎ.ಟಿ.ಗಿರಡ್ಡಿ, ಬಸವರಾಜ ಭೂತಾಳಿ, ಸಿಪಿಐ ಶ್ರೀಶೈಲ ಬ್ಯಾಕೂಡ, ಬಿಇಒ ಅಜಿತ ಮನ್ನಿಕೇರಿ ಇತರರಿದ್ದರು.