ಚಿತ್ರದುರ್ಗ: ಸಮಾಜಕ್ಕೆ ಹಿರಿಯ ನಾಗರಿಕರ ಮಾರ್ಗದರ್ಶನ ಅಗತ್ಯವಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ,ಜಿಲ್ಲಾ ಕಾನೂನು ಸೇವೆಗಳ ಪ್ರಾ ಧಿಕಾರ ಸದಸ್ಯ ಕಾರ‌್ಯದರ್ಶಿ ಎಂ.ವಿಜಯ್ ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ,ವಕೀಲರ ಸಂಘ,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,ಅಂಗವಿಕಲರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಆರೋಗ್ಯ ಇಲಾಖೆಯಿಂದ ನಗರದ ಜಿಲ್ಲಾಬಾಲ ಭವನದಲ್ಲಿ ಮಂಗಳವಾರ ಏರ್ಪಡಿಸಿದ್ದ ಹಿರಿಯ ನಾಗರಿಕರ ಹಕ್ಕುಗಳ ಕಾನೂನು ಅರಿವು-ನೆರವು ಕಾರ‌್ಯಕ್ರಮ,ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಹಿರಿಯ ನಾಗರಿಕರ ಮಾರ್ಗದರ್ಶನ ಹೆಚ್ಚು ಪ್ರಾಮುಖ್ಯತೆ ಪಡೆದಿದೆ ಎಂದರು.
ಜಿಪಂ ಸಿಇಒ ಎಸ್.ಜೆ.ಸೋಮಶೇಖರ್ ಮಾತನಾಡಿ,ಆರೋಗ್ಯದ ಬದುಕು ಮುಖ್ಯ. ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿ ಕೊಳ್ಳುವ ಮೂಲಕ ಹಿರಿಯ ನಾಗರಿಕರು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳ ಬೇಕೆಂದರು. ಡಿಎಚ್‌ಒ ಡಾ.ಆರ್.ರಂಗನಾಥ್ ಮಾತ ನಾಡಿ,ಈಚಿನ ದಿನಗಳಲ್ಲಿ ಹಿರಿಯರನ್ನು ನಿರ್ಲಕ್ಷಿಸಲಾಗುತ್ತಿದೆ. ಅವರ ಆರೋಗ್ಯದ ಹಿತದೃಷ್ಟಿಯಿಂದ ಚಿಕ್ಕಮಕ್ಕಳಂತೆ ,ಅವರನ್ನು ನೋಡಿ ಕೊಳ್ಳ ಬೇಕಿದೆ.ಅವರೆಡೆ ಹೆಚ್ಚಿನ ಕಾಳಜಿ ಹಾಗೂ ಜವಾಬ್ದಾರಿ ವಹಿಸಬೇಕಿದೆ ಎಂದರು.
ಉಪಪ್ರಧಾನ ಕಾನೂನು ನೆರವು ಅಭಿರಕ್ಷಕ ಎಂ.ಮೂರ್ತಿ ಅವರು ಉಪನ್ಯಾಸ ನೀಡಿದರು. ಆರೋಗ್ಯ ಇಲಾಖೆ ಹಾಗೂ ಇಂಡಿಯಾ ನ ಎಸ್‌ಜೆಎಂ ಹಾರ್ಟ್ ಸೆಂಟರ್‌ನ ತಜ್ಞ ವೈದ್ಯರು,ಹಿರಿಯ ನಾಗರಿಕರ ಆರೋಗ್ಯ ತಪಾಸಣೆ ನಡೆಸಿದರು.
ವಕೀಲರ ಸಂಘದ ಉಪಾಧ್ಯಕ್ಷ ಬಿ.ಎಂ.ಅನಿಲ್‌ಕುಮಾರ್,ಪ್ರಧಾನ ಕಾರ‌್ಯದರ್ಶಿ ಆರ್.ಗಂಗಾಧರ್,ರಾಜ್ಯಸರ್ಕಾರಿ ನಿವೃತ್ತ ನೌಕರರ ಜಿ ಲ್ಲಾ ಸಂಘದ ಅಧ್ಯಕ್ಷ ಆರ್.ರಂಗಪ್ಪ ರೆಡ್ಡಿ,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ನಿರೂಪಣಾಧಿಕಾರಿ ಪವಿತ್ರಾ,ಜಿಲ್ಲಾಅಂಗವಿ ಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ,ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸವಿತಾ,ಹೃದಯ ರೋಗ ತಜ್ಞ ಡಾ.ಕಾರ್ತೀಕ್,ಡಾ.ಸಂದೀಪ್ ಮತ್ತಿತ ರರು ಇದ್ದರು.
(ಸಿಟಿಡಿ 26ಕಾನೂನು)
ಚಿತ್ರದುರ್ಗದಲ್ಲಿ ಮಂಗಳವಾರ ಏರ್ಪಡಿಸಿದ್ದ ಹಿರಿಯ ನಾಗರಿಕರ ಹಕ್ಕುಗಳ ಬಗ್ಗೆ ಕಾನೂನು ಅರಿವು-ನೆರವು ಕಾರ‌್ಯಕ್ರಮ ಹಾಗೂ ಆರೋಗ್ಯ ತಪಾಸಣಾ ಶಿಬಿರವನ್ನು ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ವಿಜಯ್ ಉದ್ಘಾಟಿಸಿದರು. ಜಿಪಂ ಸಿಇಒ ಎಸ್.ಜೆ.ಸೋಮ ಶೇಖರ್,ಡಿಎಚ್‌ಒ ಡಾ.ಆರ್.ರಂಗನಾಥ್,ಉಪಪ್ರಧಾನ ಕಾನೂನು ನೆರವು ಅಭಿರಕ್ಷಕ ಎಂ.ಮೂರ್ತಿ,ವಕೀಲರ ಸಂಘದ ಉಪಾಧ್ಯಕ್ಷ ಬಿ.ಎಂ.ಅನಿಲ್‌ಕುಮಾರ್,ಪ್ರಧಾನ ಕಾರ‌್ಯದರ್ಶಿ ಆರ್.ಗಂಗಾಧರ್,ಆರ್.ರಂಗಪ್ಪ ರೆಡ್ಡಿ,ಪವಿತ್ರಾ,ಜೆ.ವೈಶಾಲಿ,ಸವಿತಾ,ಡಾ.ಕಾರ್ತೀಕ್, ಡಾ.ಸಂದೀಪ್ ಮತ್ತಿತರರು ಇದ್ದರು.