ಹೂವಿನಹಡಗಲಿ: ರಾಜ್ಯದಲ್ಲಿ ಡಿ.ದೇವರಾಜ ಅರಸು ಅವರು ವಸತಿ ನಿಲಯಗಳನ್ನು ಆರಂಭಿಸಿದ್ದರಿಂದ ಅನೇಕ ಬಡ ವಿದ್ಯಾರ್ಥಿಗಳಿಗೆ ಶಿಕ್ಷಣ ದೊರೆಯುವಂತಾಯಿತು ಎಂದು ತಾಪಂ ಇಒ ಪರಮೇಶ್ವರಪ್ಪ ಹೇಳಿದರು.
ಪಟ್ಟಣದ ತಾಪಂ ಸಭಾಂಗಣದಲ್ಲಿ ತಾಲೂಕು ಆಡಳಿತ, ಬಿಸಿಎಂ ಇಲಾಖೆಯಿಂದ ಆಯೋಜಿಸಿದ್ದ ಡಿ.ದೇವರಾಜ ಅರಸು ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಬುಧವಾರ ಮಾತನಾಡಿದರು. ಅರಸು ಅವರ ಚಿಂತನೆ, ಕೊಡುಗೆಗಳು ಜೀವಂತವಾಗಿದ್ದು, ಅವರು ಜಾರಿಗೆ ತಂದಿರುವ ಯೋಜನೆಗಳಿಂದ ಅನೇಕ ಬಡ ವಿದ್ಯಾರ್ಥಿಗಳು ಸರ್ಕಾರಿ ಹುದ್ದೆ ಹೊಂದುವಂತಾಗಿದೆ. ಅರಸು ಅವರಿಂದ ಸಮಾಜದಲ್ಲಿ ಕ್ರಾಂತಿಕಾರಿ ಬದಲಾವಣೆಯಾಗಿದೆ. ಹಿಂದುಳಿದ ವರ್ಗದವರ ಶಕ್ತಿಯಾಗಿ ಕಾರ್ಯನಿರ್ವಹಿಸಿದ್ದು, ಅವರ ಜೀವನ ನಮ್ಮೆಲ್ಲರಿಗೂ ಆದರ್ಶವಾಗಬೇಕು ಎಂದರು.
ಉಪನ್ಯಾಸಕ ಬಿ.ಎಚ್.ಎಂ.ಗುರುಬಸವರಾಜ ಉಪನ್ಯಾಸ ನೀಡಿದರು. ತಹಸೀಲ್ದಾರ್ ಸಂತೋಷ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎ.ಕೊಟ್ರಗೌಡ ಸದ್ಭಾವನಾ ದಿನಾಚರಣೆಯ ಪ್ರತಿಜ್ಞಾವಿಧಿ ಬೋಧಿಸಿದರು. ಬಿಇಒ ಮಹೇಶ ಪೂಜಾರ್, ಬಿಸಿಎಂ ವಿಸ್ತರಣಾಧಿಕಾರಿ ವಿ.ರಮೇಶ, ಸಿಡಿಪಿಒ ರಾಮನಗೌಡ ಇತರರಿದ್ದರು.