ಬಳ್ಳಾರಿ : ಪತ್ರಕರ್ತರು ಬರೀ ವರದಿ ಮಾಡಿದರೆ ಸಾಲದು. ಸಮಾಜಮುಖಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಪತ್ರಕರ್ತ ಚಿಕ್ಕಪ್ಪನಹಳ್ಳಿ ಷಣ್ಮುಖಪ್ಪ ಹೇಳಿದರು.
ನಗರದ ಬಿಡಿಎಎ ಸಭಾಂಗಣದಲ್ಲಿ ಜೆಟಿ ಫೌಂಡೇಶನ್, ಶ್ರೀಲಕ್ಷ್ಮಿವೆಂಕಟೇಶ್ವರ ಫಿಲ್ಲಿಂಗ್ ಸ್ಟೇಷನ್ ಜೋಳದರಾಶಿ ಹಾಗೂ ಬಳ್ಳಾರಿ ಪತ್ರಕರ್ತರ ಸಹಯೋಗದಲ್ಲಿ ಸೋಮವಾರ ನಡೆದ ಪತ್ರಿಕಾ ದಿನಾಚರಣೆ ಮತ್ತು ಎಸ್ಸೆಸ್ಸೆಲ್ಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು. ಸ್ಥಳೀಯ ಸಮಸ್ಯೆಗಳಿಗೆ ಧ್ವನಿಯಾಗಬೇಕು. ಜನಪರ ಚಳುವಳಿಗೆ ಬೆನ್ನೆಲುಬಾಗಿ ಕಾರ್ಯನಿರ್ವಹಿಸಬೇಕು. ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಪತ್ರಿಕೆಗಳನ್ನು ಓದಬೇಕು. ಪತ್ರಿಕೆಗಳಲ್ಲಿ ಮಾಹಿತಿಯನ್ನು ಸಂಗ್ರಹಿಸಬೇಕು. ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ವಿಯಾಗಲು ಪತ್ರಿಕೆ ಓದು ಬಹಳ ಮುಖ್ಯ. ತರಗತಿ ಕೋಣೆಯಲ್ಲಿ ಬರೀ ಸಿಲಬಸ್ ಓದಿದರೆ ಸಾಲದು. ಸಾಮಾನ್ಯ ಜ್ಞಾನಕ್ಕಾಗಿ ಪತ್ರಿಕೆಗಳ ಓದು ಬಹಳ ಮುಖ್ಯ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಹಿರಿಯ ಪತ್ರಕರ್ತರಾದ ನಂಜುಂಡೇಗೌಡ, ಮಾರ್ಕ್ಸ ತೇಜಸ್ವಿ , ಮತ್ತಿಹಳ್ಳಿ ಅಹಿರಾಜ್, ಎಸ್ಪಿ ರಂಜಿತ ಕುಮಾರ ಬಂಡಾರು, ಪ್ರಾಧ್ಯಾಪಕ ಡಾ.ಕರಿಯಪ್ಪ ಮಾಳಗಿ ಮಾತನಾಡಿದರು.
ಪ್ರಮುಖರಾದ ಡಿ.ನಾಗೇನಹಳ್ಳಿ ನಂಜುಂಡೇಶ್ವರ, ಜೆ.ಟಿ.ಫೌಂಡೇಶನ ಮುಖ್ಯಸ್ಥ ತಿಮ್ಮಪ್ಪ ಜೋಳದರಾಶಿ ಇದ್ದರು.