ಚಾಮರಾಜನಗರ: ರಾಜ್ಯದಲ್ಲಿ ನಡೆಸಲು ಉದ್ದೇಶಿಸಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ವಿಶ್ವಕರ್ಮ ಸಮುದಾಯದವರು ಜಾತಿ ಕಾಲಂನಲ್ಲಿ ವಿಶ್ವಕರ್ಮ ಎಂದು ಬರೆಸಬೇಕು ಎಂದು ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ಜಿಲ್ಲಾಧ್ಯಕ್ಷ ಮಂಜುನಾಥ್ ವಿಶ್ವಕರ್ಮ ತಿಳಿಸಿದರು.
ವಿಶ್ವಕರ್ಮ ಸಮುದಾಯಗಳಲ್ಲಿ ಸುಮಾರು 40-42 ಉಪಪಂಗಡಗಳು ಇದ್ದು, ಸಮುದಾಯದ ಜನರು ಯಾವುದೇ ಗೊಂದಲವನ್ನು ಮಾಡಿಕೊಳ್ಳಬಾರದು. ಸಮೀಕ್ಷೆಯಲ್ಲಿ ಯಾವುದೇ ಉಪಪಂಗಡದ ಹೆಸರನ್ನು ಪರಿಗಣಿಸದೇ ಜಾತಿ ಕಾಲಂನಲ್ಲಿ ವಿಶ್ವಕರ್ಮ ಹಾಗೂ ಧರ್ಮದ ಕಾಲಂನಲ್ಲಿ ಹಿಂದೂ ಎಂದು ನಮೂದಿಸುವ ಮೂಲಕ ಸಮುದಾಯದ ಒಗ್ಗಟ್ಟನ್ನು ಪ್ರದರ್ಶಿಸಬೇಕು. ಸಮೀಕ್ಷೆ ನಡೆಸಲು ಬರುವವರಿಗೆ ಅಗತ್ಯ ಮಾಹಿತಿಯನ್ನು ನೀಡಬೇಕು ಎಂದು ಶುಕ್ರವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು.
ಗೋಷ್ಠಿಯಲ್ಲಿ ಸಮುದಾಯದ ನಾಗರಾಜು, ಸಿದ್ದಪ್ಪಾಜಿ, ಸೌಭಾಗ್ಯ, ರಾಚಪ್ಪ, ನಾಗೇಂದ್ರ, ಸ್ವಾಮಿ ಹಾಜರಿದ್ದರು.