ಗದ್ದನಕೇರಿ ಕ್ರಾಸ್‌ನಲ್ಲಿರುವ ಲಕ್ಷೀದೇವಿ ದೇವಸ್ಥಾನದ ಸಮುದಾಯ ಭವನಕ್ಕೆ ಬೀಳಗಿ ಶಾಸಕ ಜೆ.ಟಿ.ಪಾಟೀಲ ಶನಿವಾರ ಭೂಮಿಪೂಜೆ ನೆರವೇರಿಸಿದರು. 
ಜಿಲ್ಲೆ

ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಶಾಸಕ ಜೆ.ಟಿ.ಪಾಟೀಲ ಚಾಲನೆ

ಬಾಗಲಕೋಟೆ: ಗದ್ದನಕೇರಿ ಕ್ರಾಸ್‌ನಲ್ಲಿರುವ ಲಕ್ಷೀದೇವಿ ದೇವಸ್ಥಾನದ ಸಮುದಾಯ ಭವನಕ್ಕೆ ಬೀಳಗಿ ಶಾಸಕ ಜೆ.ಟಿ.ಪಾಟೀಲ ಶನಿವಾರ ಭೂಮಿಪೂಜೆ ನೆರವೇರಿಸಿ, ಕಟ್ಟಡ ಕಾಮಗಾರಿಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬೀಳಗಿ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಲಕ್ಷಿ÷್ಮÃದೇವಿ ದೇವಸ್ಥಾನದ ಸಮುದಾಯ ಭವನ ನಿರ್ಮಾಣಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಮಂಜೂರಾದ ಹತ್ತು ಲಕ್ಷ ರೂ. ವೆಚ್ಚದಲ್ಲಿ ತಗುಲಿದೆ. ಗುಣಮಟ್ಟದ ಕಾಮಗಾರಿ ನಡೆಸಿ ನಿಗಽತ ಸಮಯಕ್ಕೆ ಪೂರ್ಣಗೊಳಿಸಬೇಕು ಎಂದು ಅಽಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಯಡಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಮಾಲಾ ನಾಲತ್ವಾಡ, ಗ್ರಾ.ಪಂ. ಸದಸ್ಯೆ ಸಂಭಾಜಿ ಕೊಕಾಟೆ, ಜಿ.ಪಂ ಮಾಜಿ ಅಧ್ಯಕ್ಷ ಆರ್.ಆರ್.ತುಂಬರಮಟ್ಟಿ ಜಿ.ಪಂ ಮಾಜಿ ಸದಸ್ಯ ಪಾಂಡು ಪೊಲೀಸ್, ಸಂಗಣ್ಣ ನಾಲತ್ವಾಡ, ಪರಮೇಶ್ವರ ಬಣಕಾರ, ಗದಿಗೆಪ್ಪ ಛಬ್ಬಿ, ಉಮೇಶ ಮೇಟಿ, ಮಾರುತಿ ಜಾಧವ, ಎಂ.ಎಚ್.ಪಡಸಾಲಿ, ಕೆಂಗಲಗುತ್ತಿ ಸೇರಿದಂತೆ ಇತರರು ಉಪಸ್ಥಿತರಿದ್ದರು