ಗುಂಡ್ಲುಪೇಟೆ: ಪಟ್ಟಣದ ಸಮೀಪವಿದ್ದರೂ ನಿರ್ಲಕ್ಷ್ಯಕ್ಕೊಳಗಾಗಿದ್ದ ಮಡಹಳ್ಳಿ ಗ್ರಾಮಕ್ಕೆ ಉತ್ತಮ ರಸ್ತೆ ಹಾಗೂ ಮೂಲ ಸೌಕರ್ಯಗಳನ್ನು ಕಲ್ಪಿಸಲಾಗಿದೆ ಎಂದು ಶಾಸಕ ಸಿ.ಎಸ್.ನಿರಂಜಕುಮಾರ್ ಹೇಳಿದರು.
ತಾಲೂಕಿನ ಮಡಹಳ್ಳಿ ಗ್ರಾಮದಲ್ಲಿ 20 ಲಕ್ಷ ರೂ. ವೆಚ್ಚದಲ್ಲಿ ಭಗೀರಥ ಉಪ್ಪಾರ ಸಮುದಾಯ ಭವನ ನಿರ್ಮಾಣ, 50 ಲಕ್ಷ ರೂ. ವೆಚ್ಚದ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಪಟ್ಟಣಕ್ಕೆ ಕೆಲವೇ ಅಂತರದಲ್ಲಿದ್ದರೂ ಹಿಂದೆ ಅಧಿಕಾರದಲ್ಲಿದ್ದವರು ರಸ್ತೆ, ಚರಂಡಿ ಕುಡಿಯುವ ನೀರು ಮುಂತಾದ ಮೂಲ ಸೌಕರ್ಯಗಳನ್ನು ಒದಗಿಸದೆ ಗ್ರಾಮವು ಹಿಂದುಳಿದಿತ್ತು. ತಾವು ಶಾಸಕರಾದ ನಂತರ ಕೋಟ್ಯಾಂತರ ರೂ. ವೆಚ್ಚದಲ್ಲಿ ಎಲ್ಲಾ ಕೊರತೆಗಳನ್ನೂ ನಿವಾರಿಸಲು ಕ್ರಮಕೈಗೊಳ್ಳಲಾಗಿದೆ. ಇನ್ನೂ ಹೆಚ್ಚಿನ ಅಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಮೂಖಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಹದೇವಾಚಾರ್, ಎಪಿಎಂಸಿ ಅಧ್ಯಕ್ಷ ರವಿ, ಮುಖಂಡರಾದ ಮಡಳ್ಳಿ ರಾಜಪ್ಪ, ಸಿ.ಮಹದೇವಪ್ರಸಾದ್, ಮಂಚಹಳ್ಳಿ ಬಾಬು ಹಾಗೂ ಇತರರು ಇದ್ದರು.