ಜಿಲ್ಲೆ

ಸಮುದಾಯಕ್ಕೆ ಉತ್ತಮ ಸೇವೆ ಸಲ್ಲಿಸಿ

ನಾಪೋಕ್ಲು: ಸಮುದಾಯದೊಂದಿಗೆ ಉತ್ತಮ ಒಡನಾಟ ಇಟ್ಟುಕೊಂಡು ಸೇವೆ ಸಲ್ಲಿಸಿ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ ಹೇಳಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಗ್ರಾಮ ಪಂಚಾಯಿತಿಯಿಂದ ಸಮೀಪದ ಹಳೇ ತಾಲೂಕು ಭಗವತಿ ಸಮುದಾಯ ಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ಪೋಷಣ್ ಅಭಿಯಾನದಲ್ಲಿ ಅವರು ಮಾತನಾಡಿದರು.
ಆರ್ಹ ಫಲಾನುಭವಿಗಳು ಯಾವುದೇ ಸೌಲಭ್ಯದಿಂದ ವಂಚಿತರಾಗಬಾರದು. ಅಪೌಷ್ಟಿಕತೆ ಹೋಗಲಾಡಿಸಲು ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಗಮನ ಹರಿಸಬೇಕು ಎಂದರು.
ಗ್ರಾಪಂ ಉಪಾಧ್ಯಕ್ಷೆ ಕುಲ್ಲೇಟಿರ ಹೇಮಾವತಿ ಮಾತನಾಡಿ, ನಮ್ಮ ಮನೆ ಪರಿಸರದಲ್ಲೇ ತರಕಾರಿಗಳನ್ನು ಬೆಳೆಸಿ ಅದನ್ನು ಊಟದೊಂದಿಗೆ ಬಳಸಿದಾಗ ಪೌಷ್ಟಿಕತೆ ದೊರಕುತ್ತದೆ ಎಂದರು.ಆರೋಗ್ಯ ಕಾರ್ಯಕರ್ತೆ ಉಮಾ ಮಹೇಶ್ವರಿ ಮಾತನಾಡಿದರು.