ಜಿಲ್ಲೆ

ಸಮ್ಮೇಳನಾಧ್ಯಕ್ಷರಾಗಿ ಡಾ.ಅಗ್ನಿಹೋತ್ರಿ ಆಯ್ಕೆ

ರಮೇಶ ಮೇಳಕುಂದಾ

ಕಲಬುರಗಿ: ಕನ್ನಡ ಸಾಹಿತ್ಯ ಪರಿಷತ್ ದಕ್ಷಿಣ ವಲಯದಿಂದ ಜು.೭ ರಂದು ನಗರದಲ್ಲಿ ಹಮ್ಮಿಕೊಂಡ ವಿಭಾಗಮಟ್ಟದ ೨ನೇ ದಾಸ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ದಾಸ ಸಾಹಿತ್ಯ ವಿದ್ವಾಂಸ ಡಾ.ವಾಸುದೇವ ಅಗ್ನಿಹೋತ್ರಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಕಸಾಪ ದಕ್ಷಿಣ ವಲಯದ ಅಧ್ಯಕ್ಷ ಶಾಮ ಸುಂದರ ಕುಲಕರ್ಣಿ ತಿಳಿಸಿz್ದÁರೆ. ನಗರದ ಕನ್ನಡ ಭವನದಲ್ಲಿ ಭಾನುವಾರ ಏರ್ಪಡಿಸಿದ್ದ ಪದಾಧಿಕಾರಿಗಳ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಪ್ರಕಟಿಸಿದರು. ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ್ ತೇಗಲತಿಪ್ಪಿ ಮಾತನಾಡಿದರು. ಜಿಲ್ಲಾ ಗೌರವಾಧ್ಯಕ್ಷ ಶರಣರಾಜ ಛಪ್ಪರಬಂದಿ, ದಕ್ಷಿಣ ವಲಯದ ಕಾರ್ಯದರ್ಶಿಗಳಾದ ಧನೇಶ ಮಾಲಗತ್ತಿ, ರವಿ ಶಹಾಪುರಕರ, ಸಂಘಟನಾ ಕಾರ್ಯದರ್ಶಿ ಮಂಜುನಾಥ ಕಂಬಳಿಮಠ, ಸಹ ಕಾರ್ಯದರ್ಶಿ ಮಲ್ಲಿನಾಥ ಸಂಗಶೆಟ್ಟಿ ಇದ್ದರು.