ಜಿಲ್ಲೆ

ಸರಸ್ವತಿಗೆ ಅತ್ಯುತ್ತಮ ವಿದ್ಯಾರ್ಥಿ ಪ್ರಶಸ್ತಿ

ನಿಪ್ಪಾಣಿ: ಭಾರತೀಯ ತಾಂತ್ರಿಕ ಶಿಕ್ಷಣ ಸಂಘ(ಐಎಸ್‌ಟಿಇ)ದ ರಾಜ್ಯ ವಿಭಾಗದಿಂದ ಇಲ್ಲಿನ ವಿಎಸ್‌ಎಂ ಸೋಮಶೇಖರ ಆರ್. ಕೋಠಿವಾಲೆ ತಾಂತ್ರಿಕ ಮಹಾವಿದ್ಯಾಲಯ (ವಿಎಸ್‌ಎಂಎಸ್‌ಆರ್‌ಕೆಐಟಿ)ದ ಕಂಪ್ಯೂಟರ್ ಸೈನ್ಸ್ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿನಿ ಸರಸ್ವತಿ ಉಳ್ಳೆಗಡ್ಡಿ ಅತ್ಯುತ್ತಮ ವಿದ್ಯಾರ್ಥಿ ಪ್ರಶಸ್ತಿ ಪಡೆದುಕೊಂಡಿದ್ದಾಳೆ.

ಬೆಂಗಳೂರಿನ ನ್ಯೂ ಹಾರಿಜನ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಈಚೆಗೆ ಹಮ್ಮಿಕೊಂಡಿದ್ದ ೨೦ನೇ ಐಎಸ್‌ಟಿಇ ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶ-೨೦೨೫ರಲ್ಲಿ ಶೈಕ್ಷಣಿಕ ಸಾಧನೆ, ನಾಯಕತ್ವ ಮತ್ತು ಐಎಸ್‌ಟಿಇ ಚಟುವಟಿಕೆಗಳನ್ನು ಗುರುತಿಸಿ ಪ್ರಶಸ್ತಿ ಹಾಗೂ ಪ್ರಮಾಣ ಪತ್ರ ವಿತರಿಸಲಾಯಿತು. ಪಾಲಕರು, ವಿದ್ಯಾ ಸಂವರ್ಧಕ ಮಂಡಳದ ಅಧ್ಯಕ್ಷ ಚಂದ್ರಕಾಂತ ಕೋಠಿವಾಲೆ, ಉಪಾಧ್ಯಕ್ಷ ಪಪ್ಪು ಪಾಟೀಲ, ಸಿಇಒ ಡಾ.ಸಿದ್ಧಗೌಡ ಪಾಟೀಲ, ಪ್ರಾಚಾರ್ಯ ಡಾ.ಉಮೇಶ ಪಾಟೀಲ ಹಾಗೂ ಸಿಬ್ಬಂದಿ ಅಭಿನಂದಿಸಿದ್ದಾರೆ.