ಚಿಕ್ಕಮಗಳೂರು: ಭಾರತ ರತ್ನ ಸರ್ ಎಂ.ವಿಶ್ವೇಶ್ವರಯ್ಯ ಅವರ ದೂರದೃಷ್ಠಿ ಮತ್ತು ಆದರ್ಶಗಳು ಎಲ್ಲರ ಬದುಕಿಗೆ ಪ್ರೇರಣೆಯಾದಾಗ ಭಾರತ ದೇಶವನ್ನು ಉತ್ತಮ ಪ್ರಜಾಪ್ರಭುತ್ವ ರಾಷ್ಟçವನ್ನಾಗಿ ಕಟ್ಟಬಹುದು ಎಂದು ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ತಿಳಿಸಿದರು.
ಚಿಕ್ಕಮಗಳೂರು ಸಿವಿಲ್ ಇಂಜಿನಿರ‍್ಸ್ ಸಂಘ ಸರ್ ಎಂ.ವಿಶ್ವೇಶ್ವರಯ್ಯ ಅವರ ಜನ್ಮದಿನಾಚರಣೆ ಅಂಗವಾಗಿ ನಗರದ ಆಜಾದ್‌ಪಾರ್ಕ್ ಸಮೀಪವಿರುವ ಲೋಕೋಪಯೋಗಿ ಇಲಾಖೆಯ ಮುಂಭಾಗದ ಆವರಣದಲ್ಲಿ ನಿರ್ಮಿಸಿರುವ ಸರ್. ಎಂ.ವಿಶ್ವೇಶ್ವರಯ್ಯ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮಾತಾಡಿದರು.
ವಿಶ್ವೇಶ್ವರಯ್ಯ ಅವರ ಬುದ್ಧಿವಂತಿಕೆ ಮತ್ತು ಪರಿಶ್ರಮದ ವ್ಯಕ್ತಿತ್ವದ ಜೊತೆಗೆ ಸಮಾಜಮುಖಿ ಚಿಂತನೆಗಳು ಇಂದಿನ ಯುವ ಇಂಜಿನಿಯರ್‌ಗಳಿಗೆ ಪ್ರೇರಣೆಯಾಗಲಿದೆ. ತಮ್ಮ ವೃತ್ತಿ ಬದುಕಿನಲ್ಲಿ ಯಾವುದೇ ರೀತಿಯ ಪ್ರಶ್ನಾರ್ಥಕ ಚಿಹ್ನೆಗೆ ಅವಕಾಶ ನೀಡದೇ ಬಾಳಿ ಬದುಕಿದವರು ಸರ್. ಎಂ. ವಿಶ್ವೇಶ್ವರಯ್ಯ. ಹಾಗಾಗಿಯೇ ಅವರನ್ನು ಭಾರತ ರತ್ನ ಎಂದು ಭಾರತ ಸರ್ಕಾರ ಗುರುತಿಸಿದೆ ಎಂದರು.
ಸರ್ ಎಂ.ವಿಶ್ವೇಶ್ವರಯ್ಯ ಅವರ ಆದರ್ಶಗಳಿಗೆ ತಕ್ಕಂತೆ ಅವರೊಂದಿಗೆ ಜೋಡಿ ಆದವರು ನಾಲ್ವಡಿ ಕೃಷ್ಣರಾಜ ಒಡೆಯರು. ಇವರಿಬ್ಬರ ಜೋಡಿ ಹಲವು ಶಾಶ್ವತ ಯೋಜನೆಗಳಿಗೆ ಅಡಿಪಾಯ ಹಾಕಿದ್ದು, ಕನ್ನಂಬಾಡಿ ಕಟ್ಟಿದರು. ಮಾತ್ರವಲ್ಲದೇ ಮೈಸೂರು ಬ್ಯಾಂಕ್, ಕಬ್ಬಿಣದ ಕಾರ್ಖಾನೆ, ಮೈಸೂರು ಶುಗರ್ ಕಾರ್ಖಾನೆ, ಇಂಜಿನಿಯರಿAಗ್ ಕಾಲೇಜು, ಕನ್ನಡ ಸಾಹಿತ್ಯ ಪರಿಷತ್ತು, ಮೈಸೂರು ಸ್ಯಾಂಡಲ್ ಸೋಪ್, ಮೈಸೂರು ಸಿಲ್ಕ್ ಹೀಗೆ ಭಾರತದಲ್ಲಿ ಮಾತ್ರವಲ್ಲದೇ ಜಾಗತಿಕವಾಗಿ ಮೈಸೂರು ಪ್ರಾಂತ್ಯವನ್ನು ಒಂದು ಉತ್ತುಂಗ ಸ್ಥಿತಿಗೆ ಏರಲು ಕಾರಣರಾದವರು ಸರ್. ಎಂ.ವಿಶ್ವೇಶ್ವರಯ್ಯ ಮತ್ತು ನಾಲ್ವಡಿ ಕೃಷ್ಣರಾಜ ಒಡೆಯರ್ ಎಂದು ತಿಳಿಸಿದರು.
ಪ್ರಜಾ ಪ್ರಭುತ್ವ ವ್ಯವಸ್ಥೆಯಲ್ಲಿ ನಮ್ಮ ಕರ್ತವ್ಯ ಏನು ಎಂಬುದು ನಾವು ಅಂದುಕೊAಡAತೆ ಇಲ್ಲದಿದ್ದರೂ ಕೂಡ ರಾಮರಾಜ್ಯದ ಬಯಕೆ ಇದೆ. ರಾಮರಾಜ್ಯ ಎಂದರೆ ಬೇರೇನು ಅಲ್ಲ. ಪ್ರಶ್ನಿಸುವಂತಹ ಪ್ರಜಾಪ್ರಭುತ್ವ ಗಟ್ಟಿಯಾಗಲಿ, ಉತ್ತಮ ಪ್ರಜಾಪ್ರಭುತ್ವದ ಕಡೆಗೆ ಸಮಾಜವನ್ನು ಕೊಂಡೊಯ್ಯಲು ಸ್ವಾಮಿ ವಿವೇಕಾನಂದ, ಸರ್.ಎಂ. ವಿಶ್ವೇಶ್ವರಯ್ಯ ಹಾಗೂ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಬದುಕಿನ ಆದರ್ಶಗಳು ಪ್ರೇರಣೆಯಾಗಿದೆ ಎಂದರು.
ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಮಾತನಾಡಿ, ಭಾರತ ರತ್ನ ಸರ್. ಎಂ.ವಿಶ್ವೇಶ್ವರಯ್ಯ ಅವರು ಕೊಟ್ಟಿರುವ ಹಲವಾರು ಯೋಜನೆಗಳು ಅವರಿಗಿದ್ದ ಸಾಮಾಜಿಕ ಕಳಕಳಿಗೆ ಸಾಕ್ಷಿಯಾಗಿವೆ. ಈ ಯೋಜನೆಗಳು ವ್ಯತಿರಿಕ್ತವಾಗದಂತೆ ಪ್ರಜಾಪ್ರಭುತ್ವದ ನೆಲೆಯಲ್ಲಿ ನಡೆಯುತ್ತಿವೆ ಅಂತಾದರೆ ಎಲ್ಲರೂ ಕೂಡ ವಿಶ್ವೇಶ್ವರಯ್ಯ ಅಗಬಹುದು. ಇಂತಹ ಮಹನೀಯರ ಹಾದಿಯಲ್ಲಿ ನಡೆದಾಗ ಮಾತ್ರ ಸ್ವಾಸ್ಥö್ಯ ಸಮಾಜ ಕಟ್ಟಲು ಸಾಧ್ಯ ಎಂದು ಹೇಳಿದರು.
ಚಿಕ್ಕಮಗಳೂರು ಜಿಲ್ಲಾ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆ.ಎಸ್. ಶಾಂತೇಗೌಡ, ನಿವೃತ್ತ ಕಾರ್ಯಪಾಲಕ ಇಂಜಿನಿಯರ್ ಶಿವುಪ್ರಕಾಶ್, ಜಿಲ್ಲಾ ಸಿವಿಲ್ ಇಂಜಿನಿರ‍್ಸ್ ಸಂಘದ ಅಧ್ಯಕ್ಷ ಜಿ. ಎಲ್. ಶಶಿಧರ್, ಕಾರ್ಯದರ್ಶಿ ವಿರೂಪಾಕ್ಷ, ಸಿವಿಲ್ ಇಂಜಿನಿರ್ ಸಂಘದ ಮಾಜಿ ಅಧ್ಯಕ್ಷ ಜಿ. ರಮೇಶ್ ಉಪಸ್ಥಿತರಿದ್ದರು.