ಹಾಸನ: ಪ್ರಜಾಪ್ರಭುತ್ವದಲ್ಲಿ ಮತದಾರರಿಂದ ಆಯ್ಕೆಯಾಗಿ ಅತೀ ಹೆಚ್ಚು ಸ್ಥಾನ ಪಡೆದುಕೊಳ್ಳುವ ಮೂಲಕ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದ್ದು, ಇದನ್ನು ಉರುಳಿಸಲು ಬಿಜೆಪಿ ಮತ್ತು ಜೆಡಿಎಸ್ ನಾಯಕರು ಇನ್ನಿಲ್ಲದ ಕಸರತ್ತು ನಡೆಸುತ್ತಿರುವುದು ನಿಜಕ್ಕೂ ಖಂಡನೀಯ ಎಂದು ಕಾಂಗ್ರೆಸ್ ಕಾರ್ಯಕರ್ತ ಪ್ರವೀಣ್ ಗೌಡ ಆಕ್ರೋಶ ವ್ಯಕ್ತಪಡಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಧಿಕಾರದ ಗದ್ದುಗೆಯಿಂದ ಕೆಳಗಿಳಿಸಲು ಮೂಡ ಹಗರಣ ಮತ್ತು ವಾಲ್ಮೀಕಿ ನಿಗಮದ ಹಗರಣದ ಹೆಸರಿನಲ್ಲಿ ಕುತಂತ್ರ ನಡೆಸುತ್ತಿದೆ. ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಅವರು ಹಿಂಬಾಗಿಲಿನಿಂದ ರಾಜಕಾರಣ ಮಾಡಲು ಮುಂದಾಗಿದ್ದಾರೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಅವರ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದು ಇದರಿಂದ ಮೈತ್ರಿ ಸರ್ಕಾರದಲ್ಲಿ ಬಿರುಕು ಉಂಟಾಗಿದೆ. ಮೊದಲು ಅದನ್ನು ಸರಿಪಡಿಸಿಕೊಳ್ಳಲಿ ಅದನ್ನು ಬಿಟ್ಟು ಕಾಂಗ್ರೆಸ್ ಸರ್ಕಾರದ ವಿರುದ್ಧ ಕುತಂತ್ರ ನಡೆಸಿದರೆ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಎಚ್ಚರಿಸಿದರು