oppo_2 
ಜಿಲ್ಲೆ

ಸರ್ಕಾರ ಗೆಜೆಟ್ ನೋಟಿಫಿಕೇಷನ್ ಹೊರಡಿಸಲಿ

ಮದ್ದೂರು: ರೈತ ಹುತಾತ್ಮರ ದಿನಾಚರಣೆ ಹಾಗೂ ದೇವನಹಳ್ಳಿ ಭೂಮಿ ಹೋರಾಟದ ವಿಜಯೋತ್ಸವ ಕಾರ್ಯಕ್ರಮವನ್ನು ಪಟ್ಟಣದ ಮಳವಳ್ಳಿ ರಸ್ತೆಯಲ್ಲಿರುವ ಪ್ರೊ.ಎಂ.ಡಿ. ನಂಜುಂಡಸ್ವಾಮಿ ಪ್ರತಿಮೆ ಮುಂಭಾಗದಲ್ಲಿ ಹಮ್ಮಿಕೊಳ್ಳಲಾಗಿತ್ತು.

ರೈತ ಸಂಘದ ವಿಭಾಗೀಯ ಉಪಾಧ್ಯಕ್ಷ ಬೋರಾಪುರ ಶಂಕರೇಗೌಡ ಮಾತನಾಡಿ, ದೇವನಹಳ್ಳಿ ಚನ್ನರಾಯಪಟ್ಟದ 13 ಹಳ್ಳಿಗಳ 1,777 ಎಕರೆ ಭೂ ಸ್ವಾಧೀನ ಕೈಬಿಟ್ಟಿರುವುದಕ್ಕೆ ರಾಜ್ಯ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇವೆ. ಈ ಕೂಡಲೇ ಭೂ ಸ್ವಾಧೀನ ಕೈ ಬಿಟ್ಟಿರುವ ಸಂಬಂಧ ಗೆಜೆಟ್ ನೋಟಿಫಿಕೇಷನ್ ಹೊರಡಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿದರು.

ಭೂ ಸುಧಾರಣೆ ತಿದ್ದುಪಡಿ ಕಾಯ್ದೆಯನ್ನು ಮುಂಬರುವ ಅಧಿವೇಶನದಲ್ಲಿ ವಾಪಸ್ ಪಡೆಯಬೇಕು. ಎಂಪಿಎಂಸಿ ಕಾಯ್ದೆಯನ್ನು ಮತ್ತಷ್ಟು ಗಟ್ಟಿಗೊಳಿಸಬೇಕು. ರೈತರ ಪರವಾಗಿ ಹಲವು ಯೋಜನೆಗಳನ್ನು ರೂಪಿಸುವ ಮೂಲಕ ರೈತರಿಗೆ ಅನುಕೂಲ ಕಲ್ಪಿಸಬೇಕೆಂದು ಆಗ್ರಹಿಸಿದರು.

ಮುಖಂಡರಾದ ವಳಗೆರೆಹಳ್ಳಿ ಉಮೇಶ್, ಕೆ.ಮಲ್ಲಯ್ಯ, ಬಿ.ಎನ್.ದೇವರಾಜು, ವಿನೋದ್‌ಬಾಬು, ರತ್ನಮ್ಮ, ಜಿ.ಎ.ಶಂಕರ್, ಲಿಂಗಪ್ಪಾಜಿ, ಗೊಲ್ಲರದೊಡ್ಡಿ ಅಶೋಕ್, ಸಿದ್ದೇಗೌಡ, ರವಿಕುಮಾರ್ ಹಾಜರಿದ್ದರು.