ಜಿಲ್ಲೆ

ಸರ್ಕಾರದ ಆದೇಶ ಸ್ವಾಗತಾರ್ಹ

ಹುಬ್ಬಳ್ಳಿ: ಎಸ್​ಎಸ್​ಎಲ್​ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ನಡೆಸಲು ಉದ್ದೇಶಿಸಿದ್ದ ವಿಶೇಷ ಪರಿಹಾರ ಬೋಧನಾ ತರಗತಿಗಳನ್ನು ಮುಂದೂಡಿರುವ ರಾಜ್ಯ ಸರ್ಕಾರದ ಕ್ರಮ ಸ್ವಾಗತಾರ್ಹ ಎಂದು ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘ ಹೇಳಿದೆ.

ಎಸ್​ಎಸ್​ಎಲ್​ಸಿ ಪರೀಕ್ಷೆ-2 ತಯಾರಿಗಾಗಿ ಮೇ 15ರಿಂದ ಜೂನ್ 5ರವರೆಗೆ ವಿಶೇಷ ಪರಿಹಾರ ಬೋಧನಾ ತರಗತಿಗಳನ್ನು ನಡೆಸಲು ನಿರ್ಧರಿಸಲಾಗಿತ್ತು. ಇದನ್ನು ಮೇ 29ರಿಂದ ಜೂನ್ 13ರವರೆಗೆ ನಡೆಸಲು ನಿರ್ಧರಿಸಲಾಗಿದೆ. ಪ್ರೌಢಶಿಕ್ಷಣ ನಿರ್ದೇಶಕರು, ವಿಶೇಷ ಪರಿಹಾರ ಬೋಧನಾ ತರಗತಿಗಳನ್ನು ಮುಂದೂಡಿ ಆದೇಶ ಹೊರಡಿಸಿರುವುದರಿಂದ ಶಿಕ್ಷಕರು ಮತ್ತು ಅವರ ಕುಟುಂಬದ ಸದಸ್ಯರು 14 ದಿನಗಳ ಬೇಸಿಗೆ ರಜೆಯನ್ನು ಸಂತೋಷದಿಂದ ಅನುಭವಿಸುವಂತಾಗಿದೆ ಎಂದು ಸಂಘದ ಅಧ್ಯಕ್ಷ ಸಂದೀಪ ಬೂದಿಹಾಳ ಹರ್ಷ ವ್ಯಕ್ತಪಡಿಸಿದ್ದಾರೆ.