ಶ್ರೀರಂಗಪಟ್ಟಣ: ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶಕ್ಕೆ ಮಣಿದು ತಮಿಳುನಾಡಿಗೆ ಪುನಃ ನೀರು ಹರಿಸುತ್ತಿರುವ ಕಾಂಗ್ರೆಸ್ ಸರ್ಕಾರದ ನಡೆಯ ವಿರುದ್ಧ ಭೂಮಿ ತಾಯಿ ಹೋರಾಟ ಸಮಿತಿ ಕಾರ್ಯಕರ್ತರು ಪಟ್ಟಣದಲ್ಲಿ ಬುಧವಾರ ಪಂಜಿನ ಮೆರವಣಿಗೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಪಟ್ಟಣದ ಕುವೆಂಪು ವೃತ್ತದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಹೋರಾಟ ಸಮಿತಿಯ ಅಧ್ಯಕ್ಷ ಬಲ್ಲೇನಹಳ್ಳಿ ಬಿ.ಸಿ.ಕೃಷ್ಣೇಗೌಡ ನೇತೃತ್ವದಲ್ಲಿ ಜಮಾವಣೆಗೊಂಡ ಹಲವಾರು ಕಾರ್ಯಕರ್ತರು ಹೆದ್ದಾರಿಯ ಉದಕ್ಕೂ ಕೈಯಲ್ಲಿ ಪಂಜು ಹಿಡಿದು ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಜಿಲ್ಲಾ ಉಸ್ತುವಾರಿ ಮಂತ್ರಿ ಚಲುವರಾಯಸ್ವಾಮಿ ಸೇರಿದಂತೆ ರಾಜ್ಯ ಕಾಂಗ್ರೆಸ್ ಸರ್ಕಾರದ ಜನಪ್ರತಿನಿಧಿಗಳ ವಿರುದ್ಧ ಸಾಲು ಸಾಲು ಘೋಷಣೆ ಕೂಗಿ ಬಾಯಿ ಬಡಿದುಕೊಂಡು ಆಕ್ರೋಶ ವ್ಯಕ್ತಪಡಿಸಿದರು.
ರೈತ ನಾಯಕ ಕೆ.ಎಸ್. ನಂಜುಂಡೇಗೌಡ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಮಿತಿಯ ಉಪಾಧ್ಯಕ್ಷರಾದ ಜಯರಾಮೇಗೌಡ, ಜಗದೀಶ್, ಸಂಚಾಲಕರಾದ ಡಿ.ಮಂಜುನಾಥ್, ಧನಂಜಯ್ಯ, ಸಂಘಟನಾ ಕಾರ್ಯದರ್ಶಿಗಳಾದ ಶಿವರಾಜು, ಮಹಾಲಿಂಗು, ಪ್ರಧಾನ ಕಾರ್ಯದರ್ಶಿ ಎಂ.ವಿ.ಕೃಷ್ಣ, ಖಜಾಂಚಿ ಉಂಡುವಾಡಿ ಮಹದೇವು, ಹೋಬಳಿ ಸಂಚಾಲಕ ಪಾಲಹಳ್ಳಿ ರಾಮಚಂದ್ರು, ಪದಾಧಿಕಾರಿಗಳಾದ ರವಿಲಕ್ಷ್ಮಣ, ಚಾಮರಾಜು, ಸಿದ್ದೇಗೌಡ, ರಾಮಚಂದ್ರು,ರಮೇಶ್, ಕಿರಂಗೂರು ಪುಟ್ಟಣ, ಬಲ್ಲೇನಹಳ್ಳಿ ಮಹೇಶ್ ಇದ್ದರು.