ರಾಯಚೂರು: ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಸರ್ಕಾರದ ಯೋಜನೆಗಳನ್ನು ಸದ್ಭಳಕೆ ಮಾಡಿಕೊಂಡು ಮಹಿಳೆಯರು ಆರ್ಥಿಕವಾಗಿ ಸದೃಢರಾಗಬೇಕು ಎಂದು ೆವರ್ಡ್-ಕೆ ಸಂಸ್ಥೆ ಜಿಲ್ಲಾ ಕಾರ್ಯದರ್ಶಿ ಸತೀಶ ಹಿರೇಮಠ ಹೇಳಿದರು.
ನಗರದಲ್ಲಿ ಇಂದಿರಾ ಬ್ರಿಗೇಡ್ ಸಂಸ್ಥೆಯಿಂದ ಸಮರ್ಥ ಯೋಜನೆಯಡಿ ತರಬೇತಿ ಪಡೆದ ಲಾನುಭವಿಗಳಿಗೆ ಬುಧವಾರ ಹಮ್ಮಿಕೊಂಡಿದ್ದ ಪ್ರಮಾಣಪತ್ರ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಸ್ವಯಂ ಉದ್ಯೋಗಕ್ಕೆ ಮುಂದಾಗಬೇಕು ಎಂದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಹಿಳೆಯರಿಗಾಗಿ ಕೌಶಲ್ಯ ಆಧಾರಿತ ಯೋಜನೆಗಳನ್ನು ಜಾರಿಗೆ ತಂದಿದೆ. ಯೋಜನೆ ಮೂಲಕ ಮಹಿಳೆಯರಿಗೆ ತರಬೇತಿ ನೀಡಿ ಉದ್ಯೋಗ ನೀಡಲಾಗುತ್ತಿದೆ. ಜತೆಗೆ ಸ್ವಂತ ಉದ್ಯೋಗ ಮಾಡಲು ಇಚ್ಛಿಸುವ ಮಹಿಳೆಯರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಲಾಗುತ್ತಿದೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ಅನೇಕ ಇಲಾಖೆಗಳಲ್ಲಿ ಮಹಿಳೆಯರಿಗಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸಿದ್ದು, ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ಇಂದಿರಾ ಬ್ರಿಗೇಡ್ ಅಧ್ಯಕ್ಷೆ ರಜೀಯಾ ಸುಲ್ತಾನ್, ತರಬೇತುದಾರರಾದ ಶಾಲಿನಿ ಹೂಗಾರ, ಮದೀಯಾ ಉಪಸ್ಥಿತರಿದ್ದರು.