ಬಾಗಲಕೋಟೆ: ಸಮಗ್ರ ಶಿಕ್ಷಣ ಯೋಜನೆಯಡಿ ಅಂಗವಿಕಲರ ಮಕ್ಕಳಿಗೆ ಹಲವಾರು ಸೌಲಭ್ಯಗಳಿದ್ದು, ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂ.ವಿವೇಕಾನಂದ ಹೇಳಿದರು.
ನವನಗರದ ಅಗಸ್ತ್ಯ ಕೋರ್ ವಿಜ್ಞಾನ ಕೇಂದ್ರದಲ್ಲಿ ಭಾನುವರ ಶಾಲಾ ಶಿಕ್ಷಣ ಇಲಾಖೆಯ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ ಹಮ್ಮಿಕೊಂಡಿದ್ದ ಬಾಗಲಕೋಟೆ, ಬಾದಾಮಿ ಮತ್ತು ಹುನಗುಂದ ತಾಲೂಕಿನ ಅಂಗವಿಕಲ ಮಕ್ಕಳ ವೈದ್ಯಕೀಯ ತಪಾಸಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಅಂಗವಿಕಲ ಮಕ್ಕಳಿಗೆ ಉಚಿತ ವೈದ್ಯಕೀಯ ತಪಾಸಣಾ ಮಾಡಿ ಅರ್ಹರಿಗೆ ಸಾಧನ ಸಲಕರಣೆಗಳನ್ನು ನೀಡಲಾಗುತ್ತದೆ. ಇದನ್ನು ಪಾಲಕರು ಮಕ್ಕಳಿಗೆ ತಪಾಸಣಾ ಮಾಡಿಸಿ ಸಲಕರಣೆಗಳನ್ನು ಪಡೆದುಕೊಳ್ಳಬೇಕು ಎಂದರು.
ವೇದಿಕೆಯ ಮೇಲೆ ಜಿಲ್ಲಾ ಯೋಜನಾ ಸಮನ್ವಯಾಽಕಾರಿ ಸಿ.ಆರ್.ಓಣಿ, ಬಾಗಲಕೋಟೆ ಮತ್ತು ಹುನಗುಂದ ಕ್ಷೇತ್ರ ಶಿಕ್ಷಣಾಽಕಾರಿಗಳಾದ ಎಂ.ಎಸ್.ಬಡದಾನಿ, ಜಾಸ್ಮೀನ್ ಕಿಲ್ಲೇದಾರ, ಬಾದಾಮಿ ಕ್ಷೇತ್ರ ಸಮನ್ವಯಾಽಕಾರಿ ಎಂ.ಬಿ.ದೊಡ್ಡಪ್ಪನ್ನವರ, ಅಕ್ಷರದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ನಾಗರಾಜ ದೇಶಪಾಂಡೆ, ಜಿಲ್ಲಾಸ್ಪತ್ರೆಯ ಎಲುಬು ಕೀಲು ತಜ್ಞ ವೈದ್ಯ ಡಾ.ಶಾಂತಗೌಡ ಪಿ.ಕೆ. ಇದ್ದರು. ಜಿಲ್ಲಾ ಕಚೇರಿಯ ಸಹಾಯಕ ಸಮನ್ವಯಾಽಕಾರಿ ಎಸ್.ಕೆ.ಕಲ್ಲೂರ ಪ್ರಾಸ್ಥಾವಿಕವಾಗಿ ಮಾತನಾಡಿದರು. ವೈದ್ಯಕೀಯ ತಪಾಸಣಾ ಶಿಬಿರದಲ್ಲಿ ಬಾಗಲಕೋಟೆ, ಬಾದಾಮಿ ಮತ್ತು ಹುನಗುಂದ ತಾಲೂಕಿನ ಅಂಗವಿಕಲ ಮಕ್ಕಳು ಭಾಗವಹಿಸಿ ತಪಾಸಣಾ ಮಾಡಿಸಿಕೊಂಡರು.