ಜಿಲ್ಲೆ

ಸರ್ಕಾರದ ಯೋಜನೆಗಳ ಸದುಪಯೋಗಪಡಿಸಿಕೊಳ್ಳಿ

ಚಾಮರಾಜನಗರ: ಸಾರ್ವಜನಿಕರು ಸರ್ಕಾರದ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಬಿಸಲವಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಾಲರಾಜ್ ತಿಳಿಸಿದರು.

ತಾಲೂಕಿನ ಬಿಸಲವಾಡಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಗುರುವಾರ 2023-24ನೇ ಸಾಲಿನ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಲಾನುಭವಿಗಳಿಗೆ ಆದೇಶ ಪತ್ರವನ್ನು ವಿತರಿಸಿ ಮಾತನಾಡಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಗ್ರಾಮೀಣ ಭಾಗದ ಜನರಿಗೆ ವಸತಿ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಹಲವಾರು ವಸತಿ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಯೋಜನೆಗಳ ಸದುಪಯೋಗಪಡಿಸಿಕೊಂಡು ಸೂಕ್ತ ಸಮಯಕ್ಕೆ ಮನೆ ನಿರ್ಮಾಣ ಮಾಡಿಕೊಳ್ಳಬೇಕು. ಈ ಮೂಲಕ ಗ್ರಾಮೀಣ ಭಾಗದ ಜನರು ಉತ್ತಮ ಬದುಕು ಕಟ್ಟಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ 2023-24ನೇ ಸಾಲಿನ ಪ್ರಧಾನ ಮಂತ್ರಿ ಆವಾಸ್ ಯೋಜನೆಯ 59 ಲಾನುಭವಿಗಳಿಗೆ ಕಾಮಗಾರಿ ಆದೇಶ ಪತ್ರವನ್ನು ವಿತರಣೆ ಮಾಡಲಾಯಿತು.

ಈ ವೇಳೆ ಸದಸ್ಯರಾದ ಕುಮಾರ್, ಅಲೋಕ್, ಗುರುಸ್ವಾಮಿ, ಸಿದ್ದರಾಜು, ಮಲ್ಲೇಶ್, ನಾಗಮ್ಮ, ಮಣಿ, ಅಭಿವೃದ್ಧಿ ಅಧಿಕಾರಿ ಶಿವಮೂರ್ತಿ, ಕಾರ್ಯದರ್ಶಿ ಗೋವಿಂದರಾಜು ಹಾಗೂ ನೌಕರ ವರ್ಗದವರು ಹಾಜರಿದ್ದರು.