ರಾಜು ನಾಯ್ಕರ್ 
ಜಿಲ್ಲೆ

ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

ಬಾಗಲಕೋಟೆ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಹಣವನ್ನು ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ಸರ್ಕಾರ ದಲಿತ ವಿರೋಽ ನಡೆ ಅನುಸರಿಸುತ್ತಿದೆ ಎಂದು ಆರೋಪಿಸಿ -ೆ. ೨೮ ರಂದು ಬೆಳಗ್ಗೆ ೧೧ ಗಂಟೆಗೆ ಜಿಲ್ಲಾಡಳಿತ ಭವನದ ಎದುರು ಜನಾಂದೋಲನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ ತಿಳಿಸಿದ್ದಾರೆ.

ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಫೆ.೨೮ರಂದು ನವನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಿಂದ ಆರಂಭಗೊಳ್ಳುವ ಪಾದಯಾತ್ರೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ನಂತರ ಜಿಲ್ಲಾಡಳಿತ ಭವನ ತಲುಪಿ ಪ್ರತಿಭಟನಾ ಸಭೆಯಾಗಿ ಮಾರ್ಪಡಲಿದೆ. ಇದೇ ಸಂದರ್ಭದಲ್ಲಿ ಜಿಲ್ಲಾಽಕಾರಿಗಳ ಕಚೇರಿಗೆ ಕೂಡ ಮುತ್ತಿಗೆ ಹಾಕಿ ಸರ್ಕಾರದ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಹೇಳಿದ್ದಾರೆ.

ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯ ಮುಖಂಡರು, ಜಿಲ್ಲೆಯ ಪಕ್ಷದ ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಶಾಸಕರು, ಮಾಜಿ ವಿಧಾನ ಪರಿಷತ್ ಸದಸ್ಯರು ಎಸ್ಸಿ ಮೋರ್ಚಾ ಮತ್ತು ಎಸ್ಟಿ ಮೋರ್ಚಾ ಎಲ್ಲ ಪದಾಽಕಾರಿಗಳು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.