ಗುಂಡ್ಲುಪೇಟೆ: ಕಾರ್ಮಿಕ ಸಂಘಕ್ಕೆ ಅಗತ್ಯವಾದ ಕಚೇರಿ ನಿರ್ಮಾಣಕ್ಕೆ ಅನುದಾನ ನೀಡಲಾಗುವುದು ಎಂದು ಶಾಸಕ ಎಚ್.ಎಂ.ಗಣೇಶ್‌ಪ್ರಸಾದ್ ಹೇಳಿದರು.
ಪಟ್ಟಣದ ಚಾಮರಾಜನಗರ ರಸ್ತೆಯಲ್ಲಿರುವ ಶ್ರೀ ಆಂಜನೇಯ ಲಾರಿ ಲೋಡರ್ಸ್ ಅಸೋಸಿಯೇಷನ್ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಮಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕೂಲಿ ಕಾರ್ಮಿಕರು ಸಂಘಟಿತರಾದಾಗ ಮಾತ್ರ ಆರ್ಥಿಕವಾಗಿ, ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಮುಂದೆ ಬರಲು ಸಾಧ್ಯವಾಗುತ್ತದೆ. ಪ್ರತಿಯೊಬ್ಬರೂ ಕಾರ್ಮಿಕ ಇಲಾಖೆಯಿಂದ ಕಾರ್ಡ್ ಪಡೆದುಕೊಂಡು ಸರ್ಕಾರದಿಂದ ಬರುವ ಸವಲತ್ತುಗಳನ್ನು ಪಡೆದುಕೊಳ್ಳಬೇಕು. ತಮ್ಮ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸಬೇಕು ಇದರಿಂದಾಗಿ ಮುಂದಿನ ದಿನಗಳಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯವಾಗಲಿದೆ ಎಂದರು.
ಸಂಘದ ಅಧ್ಯಕ್ಷ ರವಿ, ಕಾರ್ಯದರ್ಶಿ ಶ್ರೀನಿವಾಸ, ಕಾಡಾ ಮಾಜಿ ಅಧ್ಯಕ್ಷ ಎಚ್.ಎಸ್.ನಂಜಪ್ಪ, ಚಾಮುಲ್ ನಿರ್ದೇಶಕ ನಂಜುಂಡಪ್ರಸಾದ್, ಜಿಪಂ ಮಾಜಿ ಸದಸ್ಯ ಕೆ.ಎಸ್.ಮಹೇಶ್ ಇತರರಿದ್ದರು.