ಬಾಗಲಕೋಟೆ ನಗರದ ಬಿವಿವಿ ಸಂಘದ ಮಿನಿ ಸಭಾಭವನದಲ್ಲಿ ಶನಿವಾರ ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಶಾಸಕ ವೀರಣ್ಣ ಚರಂತಿಮಠ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ವಿತರಣೆ ಮಾತನಾಡಿದರು. ನಗರಸಭೆ ಅಧ್ಯಕ್ಷೆ ಜ್ಯೋತಿ ಭಜಂತ್ರಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಡಾ.ಕೃಷ್ಣಪ್ಪ, ಬಸವೇಶ್ವರ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಸರ್ಕಾರ ಪ್ರಾಚಾರ್ಯ ಪಿ.ಎಸ್.ಆಲೂರ ಸೇರಿದಂತೆ ಇತರರು ಇದ್ದರು.  
ಜಿಲ್ಲೆ

ಸರ್ಕಾರದ ಸೌಲಭ್ಯ ಸದುಪಯೋಗ ಪಡಿಸಿಕೊಳ್ಳಿ

ಬಾಗಲಕೋಟೆ: ವಿದ್ಯಾರ್ಥಿಗಳಿಗಾಗಿ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ. ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚು ಆಂಕ ಪಡೆದ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ನೀಡುತ್ತಿದೆ. ಸರ್ಕಾರದ ಸೌಲಭ್ಯ ವಿದ್ಯಾರ್ಥಿಗಳು ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ವೀರಣ್ಣ ಚರಂತಿಮಠ ಹೇಳಿದರು.
ನಗರದ ಬಿವಿವಿ ಸಂಘದ ಮಿನಿ ಸಭಾಭವನದಲ್ಲಿ ಶನಿವಾರ ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಲ್ಯಾಪ್ ಟಾಪ್ ನೀಡಲಾಗಿದೆ. ವಿದ್ಯಾರ್ಥಿಗಳು ತಮ್ಮ ಶಿಕ್ಷಕರು ಗುರುಗಳ ಮಾರ್ಗದರ್ಶನದಲ್ಲಿ ಶೈಕ್ಷಣಿಕ, ಕ್ರೀಡಾಕ್ಷೇತ್ರದಲ್ಲಿ ಶಾಲೆ,ಕಾಲೇಜಿಗೆ ಕೀರ್ತಿ ತರುವಂತಾಗಬೇಕು ಎಂದರು.
ಕಾರ್ಯಕ್ರಮದಲ್ಲಿ ೨೬ ವಿದ್ಯಾರ್ಥಿಗಳಿಗೆ ಲ್ಯಾಪ ಟ್ಯಾಪ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಜ್ಯೋತಿ ಭಜಂತ್ರಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಡಾ.ಕೃಷ್ಣಪ್ಪ, ಬಸವೇಶ್ವರ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಸರ್ಕಾರ ಪ್ರಾಚಾರ್ಯ ಪಿ.ಎಸ್.ಆಲೂರ ಸೇರಿದಂತೆ ಇತರರು ಇದ್ದರು.