ಗುಂಡ್ಲುಪೇಟೆ: ತಾಲೂಕಿನ ಹುಂಡೀಪುರ ಗ್ರಾಮ ಪಂಚಾಯಿತಿಯು ಅಮೃತ ಗ್ರಾಮ ಪಂಚಾಯಿತಿಗೆ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಸರ್ಕಾರದ 25 ಲಕ್ಷ ರೂ. ಅನುದಾನದಲ್ಲಿ ಅಂಗನವಾಡಿ, ಶಾಲೆಗಳ ಮಕ್ಕಳು ಹಾಗೂ ಡಿಜಿಟಲ್ ಗ್ರಂಥಾಲಯಕ್ಕೆ ಅಂಧ ವಿದ್ಯಾರ್ಥಿಗಳ ಕಲಿಕೆಗೆ ಅಗತ್ಯವಾದ ಉಪಕರಣಗಳನ್ನು ನೀಡಲಾಯಿತು.
ಸೋಮವಾರ ಪಂಚಾಯಿತಿ ವ್ಯಾಪ್ತಿಯ ಆರು ಗ್ರಾಮಗಳ ಸರ್ಕಾರಿ ಶಾಲಾ ಮಕ್ಕಳಿಗೆ ಕ್ರೀಡಾ ಸಾಮಗ್ರಿಗಳು, ಅಂಗನವಾಡಿ ಕೇಂದ್ರಗಳಿಗೆ ಬರುವ ಮಕ್ಕಳಿಗೆ ಕುಳಿತುಕೊಳ್ಳಲು ಕುರ್ಚಿ ಹಾಗೂ ಟೇಬಲ್, ಆಟದ ಸಾಮಗ್ರಿಗಳು, ಗ್ರಾಪಂ ಕೇಂದ್ರದಲ್ಲಿರುವ ಡಿಜಿಟಲ್ ಲೈಬ್ರರಿಗೆ ಪುಸ್ತಕಗಳು ಮತ್ತು ಅಂಧ ವಿದ್ಯಾರ್ಥಿಗಳಿಗೆ ಕಲಿಕಾ ಉಪಕರಣಗಳನ್ನು (ಬೆನೆಕ್ ಲೈಬ್ರರಿ) ನೀಡಲಾಯಿತು.
ಗ್ರಾಪಂ ಅಧ್ಯಕ್ಷೆ ಲಕ್ಷ್ಮೀ ಮಂಜುನಾಥ್, ಉಪಾಧ್ಯಕ್ಷ ನಂಜಪ್ಪ, ಪಿಡಿಒ ಕುಮಾರಸ್ವಾಮಿ ಇತರರು ಇದ್ದರು.