ಜಿಲ್ಲೆ

ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರ ಅನಾವರಣ

ಚಿತ್ರದುರ್ಗ: ಜಿಲ್ಲೆಯ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಫೆ.17ರಂದು ಸಾಂಸ್ಕೃತಿಕ ನಾಯಕ ಜಗಜ್ಯೋತಿ ಬಸವಣ್ಣನವರ ಭಾವಚಿತ್ರ ಅನಾವರಣ ಸಮಾರಂಭ ಆಯೋಜಿಸಬೇಕೆಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಕ್ರಾಂತಿಯೋಗಿ ಬಸವಣ್ಣನವರು,12ನೇ ಶತಮಾನದಲ್ಲಿ ಜಾತಿ,ವರ್ಗ ರಹಿತ ಸಮಾಜ,ಕಾಯಕದ ಮಹತ್ವ ಮತ್ತು ಜೀವನ ಮಾ ರ್ಗದಂಥ ಸಾರ್ವತ್ರಿಕ ಮೌಲ್ಯಗಳನ್ನು ಪ್ರತಿಪಾದಿಸುವ ಮೂಲಕ ಸಮಾಜಕ್ಕೆ ದಾರಿ ದೀಪವಾಗಿದ್ದಾರೆ. ಮಹಿಳಾ ಅಸಮಾನತೆ ಹಾಗೂ ಮೂಢ ನಂಬಿಕೆಗಳ ಬಗ್ಗೆ ವಿರುದ್ಧ ಹೋರಾಡಿದ್ದವರು.
ಸಾರ್ವತ್ರಿಕ ಮತ್ತು ಸರ್ವಕಾಲಿಕ ಸರ್ವಜನ ಸಮಭಾವದ ತಾತ್ವಿಕತೆಗಳ ಮೂಲಕ ಕಲ್ಯಾಣ ಸಮಾಜ ಕಟ್ಟುವುದಕ್ಕೆ ಅಗತ್ಯವಿರುವ ನೀತಿಯನ್ನು ಬೋಧಿಸಿದ್ದಾರೆ. ನಮ್ಮ ಸಂವಿಧಾನದ ಆಶಯಗಳಿಗೆ ಅವರ ಚಿಂತನೆಗಳು ಸಾಂಸ್ಕೃತಿಕ ರಾಯಭಾರಿತ್ವಕ್ಕೆ ಸಮರ್ಥನೀಯ ನೆಲೆ ಒದಗಿಸಿರುವುದರಿಂದ ಬಸವಣ್ಣನವರನ್ನು ರಾಜ್ಯಸರ್ಕಾರ,ಕರ್ನಾಟಕ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವಗುರು ಬಸವಣ್ಣನವರ ಭಾವಚಿತ್ರವನ್ನು ಫೆ.13ರಂದು ಬೆಂಗಳೂರಲ್ಲಿ ಅನಾವರಣ ಗೊ ಳಿಸಿದ್ದಾರೆ. 17ರಂದು ರಾಜ್ಯಾದ್ಯಾಂತ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ತಾಲೂಕು ಕೇಂದ್ರಗಳಲ್ಲಿ ಸ್ಥಳೀಯ ಶಾಸಕರ ನೇತೃತ್ವದಲ್ಲಿ ವಿಶ್ವಗುರು ಬಸವಣ್ಣನವರ ಭಾವಚಿತ್ರ ಅನಾವರಣಗೊಳಿಸುವ ಕಾರ್ಯಕ್ರಮ ಆಯೋಜಿಸಲು ಸರ್ಕಾರ ನಿ ರ್ದೇಶಿಸಿದೆ.
ಆದ್ದರಿಂದ ಜಿಲ್ಲೆಯ ಎಲ್ಲ ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳು,ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರ ಅ ನಾವರಣಗೊಳಿಸುವ ಕಾರ್ಯಕ್ರಮವನ್ನು ಆಯೋಜಿಸಿ,ಅವರ ಭಾವಚಿತ್ರವನ್ನು ಕಡ್ಡಾಯವಾಗಿ ಅಳವಡಿಸಬೇಕು. ಭಾವಚಿತ್ರದ ಕೆ ಳಗೆ ವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕ ಎಂಬ ಅಡಿಬರಹ ಮುದ್ರಿಸಿರಬೇಕು.
ಭಾವಚಿತ್ರದ ಡಿಜಿಟಲ್ ಪ್ರತಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಅಥವಾ ಜಾಲತಾಣ ಠಿಠಿ:// ಚ್ಞ್ಞಜ್ಟಿಜಿ ಚ್ಟ್ಞಠಿ.ಜಟ.ಜ್ಞಿ ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದೆಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.