ಉಡುಪಿ: ಸರ್ಕಾರಿ ಹುದ್ದೆಗಳ ನೇಮಕಾತಿಗಳಲ್ಲ್ಲಿ ಕ್ರೀಡಾಳುಗಳಿಗೆ ಶೇ. 2ರಷ್ಟು ನೇಮಕಾತಿ ವಿಸ್ತರಿಸಿ ಸಂಪುಟದಲ್ಲಿ ಆದೇಶ ಹೊರಡಿಸಲಾಗಿದೆ. ಈ ಮೂಲಕ ಕ್ರೀಡಾ ಕ್ಷೇತ್ರಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದೆ ಎಂದು ರಾಜ್ಯ ಅಥ್ಲೆಟಿಕ್ ಸಂಸ್ಥೆಯ ಅಧ್ಯಕ್ಷ, ಗೃಹಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು.
ಅಜ್ಜರಕಾಡು ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಸಂಸ್ಥೆ ಹಾಗೂ ಕರ್ನಾಟಕ ರಾಜ್ಯ ಅಥ್ಲೆಟಿಕ್ ಸಂಸ್ಥೆ ಆಶ್ರಯದಲ್ಲಿ ಎಚ್. ಬಿ.ಆರ್. ಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ಆಯೋಜಿಸಿರುವ ರಾಜ್ಯ ಮಟ್ಟದ ಹಿರಿಯರ ಮತ್ತು ಯೂತ್ ಅಥ್ಲೆಟಿಕ್ ಸ್ಪರ್ಧೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ಪೊಲೀಸ್ ಇಲಾಖೆ ನೇಮಕಾತಿಯಲ್ಲಿ ಕ್ರೀಡಾ ಕೋಟದಲ್ಲಿ ಶೇ.2ರಷ್ಟು ಮೀಸಲಾತಿ ನೀಡಲಾಗಿದ್ದು, ಈಗಾಗಲೇ 80 ಜನ ಪೊಲೀಸರು, 16 ಮಂದಿ ಎಸ್ಐಗಳು ಆಯ್ಕೆಯಾಗಿದ್ದಾರೆ. ಇದರಲ್ಲಿ 4 ಮಂದಿ ಅಥ್ಲೆಟಿಕ್ ಕ್ರೀಡಾಪಟುಗಳಿದ್ದಾರೆ ಎಂದರು.
13 ಜಿಲ್ಲೆಗಳಲ್ಲಿ ಈಗಾಗಲೇ ಸಿಂಥೆಟಿಕ್ ಟ್ರಾ$್ಯಕ್ ಇದೆ. ಪ್ರತಿ ಜಿಲ್ಲೆಯಲ್ಲಿ ಸಿಂಥೆಟಿಕ್ ಟ್ರಾ$್ಯಕ್ ನಿರ್ಮಾಣಕ್ಕೆ ಸರ್ಕಾರ ಪ್ರಸ್ತಾವನೆ ಸಲ್ಲಿಕೆ. ಉಡುಪಿಯಲ್ಲಿರುವ ಟ್ರಾ$್ಯಕ್ ಹಾಳಾಗಿದೆ. ಈ ಬಗ್ಗೆ ಕ್ರೀಡಾ ಸಚಿವರ ಗಮನಕ್ಕೆ ತರುತ್ತೇನೆ. ಕ್ರೀಡಾ ಕ್ಷೇತ್ರದಲ್ಲಿ ಮೂಲಸೌಕರ್ಯಕ್ಕೆ ಆದ್ಯತೆ ನೀಡಲಾಗುವುದು ಎಂದರು.
ಕ್ರೀಡೆಯಲ್ಲಿ ಭಾಗವಹಿಸುವುದರಿಂದ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತದೆ ಎಂಬ ತಪು$್ಪಕಲ್ಪನೆ ಪೋಷಕರಲ್ಲಿದೆ. ಕ್ರೀಡೆಗಳಲ್ಲಿ ತೊಡಗುವುದರಿಂದ ಮನಸ್ಸು ಪ್ರುಲ್ಲವಾಗುತ್ತದೆ. ಓದಿಗೂ ಸಹಕಾರಿಯಾಗುತ್ತದೆ. ಇತ್ತೀಚಿನ ದಿನಗಳಲ್ಲಿ ವಿಶ್ವವಿದ್ಯಾಲಯಗಳಲ್ಲಿ ಕ್ರೀಡಾತಂಡಗಳು ಕಡಿಮೆಯಾಗುತ್ತಿವೆ. ಇದು ಉತ್ತಮ ಬೆಳವಣಿಗೆಯಲ್ಲ. ವಿವಿಗಳಲ್ಲೂ ಕ್ರೀಡೆಗೆ ಉತ್ತೇಜನ ಲಭಿಸಬೇಕು ಎಂದರು.
ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಉದ್ಯಮಿ ಪ್ರಸಾದ್ ರಾಜ್ ಕಾಂಚನ್, ಕ್ರೀಡಾಪಟು ಪ್ರಮೀಳಾ, ಜಿಲ್ಲಾ ಅಥ್ಲೆಟಿಕ್ ಸಂಸ್ಥೆ ಅಧ್ಯಕ್ಷ ಹರಿಪ್ರಸಾದ್ ರೈ, ರಾಜ್ಯ ಅಥ್ಲೆಟಿಕ್ ಸಂಸ್ಥೆ ಕಾರ್ಯದರ್ಶಿ ಎ. ರಾಜವೇಲು ಉಪಸ್ಥಿತರಿದ್ದರು. ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೋಶನ್ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ಸಂಸ್ಥೆಯ ಜಿಲ್ಲಾ ಕಾರ್ಯದರ್ಶಿ ದಿನೇಶ್ ಕುಮಾರ್ ಸ್ವಾಗತಿಸಿದರು.