ಜಿಲ್ಲೆ

ಸರ್ಕಾರಿ ಯೋಜನೆ ಸದ್ಬಳಕೆ ಮಾಡಿಕೊಳ್ಳಿ

ಕುರುಗೋಡು: ಸರ್ಕಾರಿ ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು ಮಹಿಳೆಯರು ಸಮಾಜದ ಮುನ್ನೆಲೆಗೆ ಬರಲು ಯತ್ನಿಸಬೇಕೆಂದು ತಹಸೀಲ್ದಾರ್ ನರಸಪ್ಪ ಹೇಳಿದರು.

ಶಕ್ತಿ ಯೋಜನೆಯಡಿ 500 ಕೋಟಿ ಪ್ರಯಾಣಿಕರು ಪ್ರಯಾಣಿಸಿದ ಪ್ರಯುಕ್ತ ಪಟ್ಟಣದ ಬಸ್ ನಿಲ್ದಾಣದಲ್ಲಿ ಸಾಂಕೇತಿಕವಾಗಿ ಟಿಕೆಟ್ ವಿತರಿಸಿ ಸೋಮವಾರ ಮಾತನಾಡಿದರು. ಸರ್ಕಾರ ಜನರ ಏಳಿಗೆಗಾಗಿ ಅನೇಕ ಯೋಜನೆಗಳನ್ನು ರೂಪಿಸುತ್ತದೆ. ಯೋಜನೆಗಳು ನಿಜವಾದ ಫಲಾನುಭವಿಗಳಿಗೆ ತಲುಪಿದಾಗ ಬಡತನ ನಿರ್ಮೂಲನೆ ಸಾಧ್ಯ. ಮಹಿಳೆಯರು ನಾನಾ ರಂಗದಲ್ಲಿ ಸಾಧನೆ ಮಾಡುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದರು. ಪುರಸಭೆ ಅಧ್ಯಕ್ಷ ಶೇಖಣ್ಣ, ಉಪಾಧ್ಯಕ್ಷ ಮಲ್ಲಿಕಾರ್ಜುನ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಾನಾಳ್ ಚನ್ನಬಸವನಗೌಡ, ಸಿಪಿಐ ವಿಶ್ವನಾಥ್ ಹಿರೇಗೌಡರ್, ಇತರರು ಇದ್ದರು.