ಜಿಲ್ಲೆ

ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಉದ್ಯೋಗ ಮೇಳ

ಹಾಸನ: ವಿದ್ಯಾರ್ಥಿಗಳು ಗುರಿ ಇಟ್ಟುಕೊಂಡು ಓದಿದರೆ ಮುಂದೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು ಎಂದು ಸರ್ಕಾರಿ ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಎಸ್.ಹೆಚ್. ಗಂಗೆಗೌಡ ಕಿವಿಮಾತು ಹೇಳಿದರು

ನಗರದ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಸಮರ್ಥನಂ ಅಂಗವಿಕಲರ ಸಂಸ್ಥೆಯ ಸಹಯೋಗದಲ್ಲಿ ಗುರುವಾರ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂತಹ ಉದ್ಯೋಗ ಮೇಳಗಳು ಹೆಚ್ಚು ನಡೆದಾಗ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ. ಅನುಭವದ ಜೊತೆಗೆ ಅವರ ಸಂಭಾವನೆಯೂ ಕೂಡ ಹೆಚ್ಚಾಗುತ್ತದೆ ಎಂದು ಹೇಳಿದರು.

ಗ್ರಾಮೀಣ ಪ್ರದೇಶದಿಂದ ಬಂದಂತಹ ಮಕ್ಕಳು ಇಂತಹ ಉದ್ಯೋಗ ಮೇಳದಲ್ಲಿ ಹೆಚ್ಚು ಹೆಚ್ಚು ಭಾಗವಹಿಸುವ ಮೂಲಕ ತಮ್ಮ ಜೀವನವನ್ನು ರೂಪಿಸಿಕೊಳ್ಳಬಹುದಾಗಿದೆ. ಉದ್ಯೋಗ ಮೇಳವನ್ನು ನಮ್ಮ ಕಾಲೇಜಿಗೆ ಬಂದು ಆ ಯೋಜನೆ ಮಾಡಿರುವಂತಹ ಸಮರ್ಥನಂ ಸಂಸ್ಥೆಯ ಎಲ್ಲಾ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.

ಸಮರ್ಥನಂ ಸಂಸ್ಥೆಯ ಟ್ರಸ್ಟಿ ವಾಸಂತಿ ಸವಣೂರು ಮಾತನಾಡಿ, ನಮ್ಮ ಸಂಸ್ಥೆಯ ಉದ್ದೇಶ ಅಂಗವಿಕಲರಿಗೆ ಸ್ವಾವಲಂಬಿಯಾ ಬದುಕನ್ನ ಕಟ್ಟಿಕೊಡುವ ನಿಟ್ಟಿನಲ್ಲಿ ಅವರಿಗೆ ಉದ್ಯೋಗದ ಅವಕಾಶಗಳನ್ನು ಸೃಷ್ಟಿ ಮಾಡುವುದು. ಇತರರು ಕೂಡ ಇದರ ಉಪಯೋಗವನ್ನು ಪಡೆದುಕೊಳ್ಳಬಹುದಾಗಿದೆ. ಈ ಕಾಲೇಜಿನಲ್ಲಿ ಈಗಾಗಲೇ ಹೆಚ್ಚು ವಿದ್ಯಾರ್ಥಿಗಳು ಉದ್ಯೋಗ ಮೇಳದ ಪ್ರಯೋಜನವನ್ನು ಪಡೆದುಕೊಂಡಿದ್ದಾರೆ ಎಂದು ಹೇಳಿದರು.

ೆ ಈ ಕಾರ್ಯಕ್ರಮದಲ್ಲಿ ಸಮರ್ಥನಂ ಸಂಸ್ಥೆಯ ಮುಖ್ಯಸ್ಥ ಸುಭಾಷ್ ಚಂದ್ರ,ಪ್ರಾಂಶುಪಾಲ ಹರ್ಷೇಂದ್ರ, ಲತಾ ಕುಲಕರ್ಣಿ, ಶಿಕ್ಷಕರಾದ ದಯಾನಂದ್, ವೀರಭದ್ರ, ಶಿವರಾಜು, ಎಂ. ಗಿರಿಧರ್, ವಿನಯ್ ಕುಮಾರ್ ಇತರರು ಇದ್ದರು.ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 3 ಗಂಟೆ ವರೆಗೆ ನಡೆದ ಉದ್ಯೋಗ ಮೇಳದಲ್ಲಿ ವಿವಿಧ ಕಂಪೆನಿಗಳು ಆಗಮಿಸಿದ್ದವು. ಎಸ್.ಎಸ್.ಎಲ್.ಸಿ, ಪಿಯುಸಿ, ಡಿಗ್ರಿ, ಐಟಿಐ, ಡಿಪ್ಲೊಮ, ಸ್ನಾತಕೋತ್ತರ ಪದವಿ ಪಡೆದ ಜಿಲ್ಲೆಯ ನೂರಾರು ನಿರುದ್ಯೋಗ ಯುವಕ ಯುವತಿಯರು ಇದರ ಸದುಪಯೋಗ ಪಡೆದುಕೊಂಡರು