ಚಿಕ್ಕಮಗಳೂರು: ಬಡವರು, ಶೋಷಿತರಿಗೆ ಶಿಕ್ಷಣ, ಆರೋಗ್ಯ ಮತ್ತು ಬದುಕು ಈ ಮೂರು ಅಂಶಗಳಿಗೆ ಒತ್ತುನೀಡಿ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.
ನಗರದ ಬಸವನಹಳ್ಳಿ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ೨೦೨೫-೨೬ನೇ ಸಾಲಿನ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳು ಹಾಗೂ ಕಂಪ್ಯೂಟರ್ ಲ್ಯಾಬ್ ಕೊಠಡಿಯನ್ನು ಉದ್ಘಾಟಿಸಿ ಮಾತನಾಡಿದರು.
ಈಗಾಗಲೇ ಸರ್ಕಾರ ಶಿಕ್ಷಣಕ್ಕೆ ಒತ್ತುನೀಡಿ ಅದೇ ರೀತಿ ಆರೋಗ್ಯ ಸೇವೆಗೆ ಉತ್ತಮ ಸ್ಪಂದನೆ ನೀಡಿದ್ದು, ನಗರದಲ್ಲಿ ನಾಲ್ಕು ಭಾಗದಲ್ಲಿ ನಮ್ಮ ಕ್ಲಿನಿಕ್ ತೆರೆದಿದೆ. ನಾಗರಿಕರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಈ ಕ್ಲಿನಿಕ್‌ನಲ್ಲಿ ಓರ್ವ ವೈದ್ಯ, ಶುಶ್ರೂಷಕಿ ಹಾಗೂ ಸಿಬಂದಿಯನ್ನು ನೇಮಕ ಮಾಡಿದೆ ಎಂದು ತಿಳಿಸಿದರು.
ಯಾವುದೇ ಖಾಸಗಿ ಕಾಲೇಜಿಗೆ ಕಡಿಮೆ ಇಲ್ಲದಂತೆ ಬಸವನಹಳ್ಳಿ ಸರ್ಕಾರಿ ಬಾಲಿಕಾ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿಯರಿಗೆ ಅಗತ್ಯವಾಗಿ ಬೇಕಾಗಿರುವ ಎಲ್ಲಾ ರೀತಿಯ ಸೌಲಭ್ಯಗಳ ಜೊತೆಗೆ ಇಂದು ಕಂಪ್ಯೂಟರ್ ಲ್ಯಾಬ್ ಉದ್ಘಾಟನೆಯಾಗಿರುವುದು ಶಿಕ್ಷಣಕ್ಕೆ ಉಪಯುಕ್ತವಾಗಿದೆ ಎಂದರು.
ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡಬೇಕೆಂಬ ಉz್ದೆÃಶದೊಂದಿಗೆ ಸರ್ಕಾರ ಹಲವಾರು ಯೋಜನೆ ಜಾರಿಗೆ ತಂದು ಶಾಲಾ-ಕಾಲೇಜುಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿದೆ ಎಂದು ಹೇಳಿದರು.
ಪ್ರಸಕ್ತ ಶೈಕ್ಷಣಿಕ ವರ್ಷದಿಂದ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ೩೦ ಲಕ್ಷ ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಇದಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಹೊಸ ಹೆಜ್ಜೆಯ ಯೋಜನೆ ಕಾರಣ ಎಂದರು.
ಉತ್ತಮ ಶಿಕ್ಷಣ ಪಡೆದ ಮೆರಿಟ್ ಆಧಾರದಲ್ಲಿ ಶಿಕ್ಷಕರು, ಉಪನ್ಯಾಸಕರು ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ನೇಮಕವಾಗುವುದರಿಂದ ಖಾಸಗಿ ಶಾಲೆಗಳಿಗಿಂತ ಗುಣಮಟ್ಟದ ಶಿಕ್ಷಣ ಸರ್ಕಾರಿ ಶಾಲೆಯಲ್ಲಿ ದೊರೆಯುತ್ತಿದೆ ಎಂಬುದನ್ನು ಪಾಲಕರು ಮನಗಾಣಬೇಕಾಗಿದೆ ಎಂದು ಹೇಳಿದರು.
ಪ್ರಪಂಚವೇ ಮೆಚ್ಚುವ ರೀತಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿರುವ ಸಂವಿಧಾನದ ಪೀಠಿಕೆಯನ್ನು ಓದಿಸಿ ಒಂದು ಪುಟವನ್ನಾದರೂ ವಿದ್ಯಾರ್ಥಿಗಳಿಂದ ಪಠಣ ಮಾಡುವ ಪರಿಪಾಠವನ್ನು ಸರ್ಕಾರಿ ಶಾಲೆಯಲ್ಲಿ ಆರಂಭಿಸುವAತೆ ಶಿಕ್ಷಕರಿಗೆ ಸಲಹೆ ನೀಡಿದರು.
ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ವರಸಿದ್ದಿ ವೇಣುಗೋಪಾಲ್ ಮಾತನಾಡಿ, ವಿದ್ಯಾರ್ಥಿನಿಯರು ಈಗಿನಿಂದಲೇ ಶ್ರಮವಹಿಸಿ ಅಧ್ಯಯನಶೀಲರಾಗಿ ಉತ್ತಮ ಶಿಕ್ಷಣ ಪಡೆದು ಮುಂದಿನ ಪರೀಕ್ಷೆಯಲ್ಲಿ ಅತೀ ಹೆಚ್ಚು ರ‍್ಯಾಂಕ್ ಪಡೆಯುವ ಮೂಲಕ ಕಾಲೇಜಿಗೆ ಮತ್ತು ಉಪನ್ಯಾಸಕರಿಗೆ ಹೆಸರು ತರಬೇಕು ಎಂದು ಹೇಳಿದರು.
ತಮ್ಮ ಮಕ್ಕಳು ಉತ್ತಮ ವ್ಯಾಸಂಗ ಮಾಡಬೇಕೆಂಬ ಗುರಿಯೊಂದಿಗೆ ಪಾಲಕರು ಶ್ರಮಪಟ್ಟು ನಿಮ್ಮನ್ನು ಕಾಲೇಜಿಗೆ ಕಳುಹಿಸುತ್ತಾರೆ. ಅದಕ್ಕೆ ಪೂರಕವಾಗಿ ಶಿಕ್ಷಣ ಪಡೆದು ಉನ್ನತ ಹುದ್ದೆಗಳಿಗೆ ಆಯ್ಕೆಯಾದಾಗ ಪಾಲಕರ ಶ್ರಮ ಸಾರ್ಥಕವಾಗುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಚಾರ್ಯ ಸತೀಶ್ ಶಾಸ್ತಿç ವಹಿಸಿದ್ದರು. ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಶುಭಾನ್ ಮತ್ತಿತರರಿದ್ದರು.