ಹೊಳೆಹೊನ್ನೂರು: ದಾನವಾಡಿ ಗ್ರಾಮದ ಶಾಲೆಯು ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ಮಾದರಿ ಶಾಲೆಯಾಗಿದೆ ಎಂದು ಬಿಇಒ ಎ.ಕೆ.ನಾಗೇಂದ್ರಪ್ಪ ಹೇಳಿದರು.
ದಾನವಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲಿಕಾ ಪರಿಸರ, ಸ್ಮಾರ್ಟ್ ಕ್ಲಾಸ್, ಡಿಜಿಟಲ್ ಗ್ರಂಥಾಲಯ ಉದ್ಘಾಟನೆ ಹಾಗೂ ಶಿಕ್ಷಕರ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಮಾತನಾಡಿ, ಸರ್ಕಾರಿ ಶಾಲೆಗಳಿಗೆ ಸಾಕಷ್ಟು ಅಗತ್ಯ ಅನುದಾನ ನೀಡಲಾಗುತ್ತಿದೆ. ಮಕ್ಕಳ ಕಲಿಕೆಗೆ ಪೂರಕವಾಗಿ ಪಾಲಕರು ಹಾಗೂ ಶಿಕ್ಷಕರು ಸಂಪೂರ್ಣ ಸಹಕಾರ ನೀಡಬೇಕು ಎಂದರು.
ನಿವೃತ್ತರಾದ ಹಿರಿಯ ಶಿಕ್ಷಕಿ ಪ್ರಭಾವತಿ ಶಿರಸಂಗಿ ಅವರನ್ನು ಸನ್ಮಾನಿಸಲಾಯಿತು. ಎಸ್‌ಡಿಎಂಸಿ ಅಧ್ಯಕ್ಷ ಜಿ.ಕೃಷ್ಣ, ಬಿಆರ್‌ಸಿ ಪಂಚಾಕ್ಷರಿ, ಅಕ್ಷರ ದಾಸೋಹ ನಿರ್ದೇಶಕ ಗಣೇಶ್, ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಪೃಥ್ವಿರಾಜ್, ಎಂ.ಎಸ್.ಮಲ್ಲಿಕಾರ್ಜುನ್, ಲಕ್ಷ್ಮೀಕಾಂತ್, ರಾಜಪ್ಪ ಇತರರಿದ್ದರು.