ವಿರಾಜಪೇಟೆಯ ಹೆಗ್ಗಳ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಸಮಾಜ ಸೇವಕ ಕುಜ್ಞಂಡ ಮಹೇಶ್ ಗಣಕಯಂತ್ರ ಕೊಡುಗೆ ನೀಡಿದರು. ಪೂಜಾ ಸಜೇಸ್, ವೆಂಕಟೇಶ್, ಶಿಲ್ಪಾ, ರಾಜಿಕ್, ಶಾಲಾ ಮುಖ್ಯಶಿಕ್ಷಕಿ ಕಮಲಮ್ಮ ಇದ್ದರು. 
ಜಿಲ್ಲೆ

ಸರ್ಕಾರಿ ಶಾಲೆಗೆ ಕಂಪ್ಯೂಟರ್ ಕೊಡುಗೆ

ವಿರಾಜಪೇಟೆ: ಇಲ್ಲಿಗೆ ಸಮೀಪದ ಹೆಗ್ಗಳ ಗ್ರಾಮದಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ದಾನಿಗಳಾದ ಕುಜ್ಞಂಡ ಮಹೇಶ್ ಅವರು ಕಂಪ್ಯೂಟರ್ ಅನ್ನು ಕೊಡುಗೆಯಾಗಿ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮಹೇಶ್ ಅವರು, ಗ್ರಾಮೀಣ ಶಾಲೆಯ ಮಕ್ಕಳು ಕೂಡ ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಅಧ್ಯಯನ ಮಾಡುವಂತಾಗಬೇಕು. ಕಂಪ್ಯೂಟರ್ ಕಲಿಕೆ ಅತಿ ಮುಖ್ಯವಾಗಿದ್ದು, ವಿದ್ಯಾರ್ಥಿಗಳಿಗೆ ಉಪಯುಕ್ತ ವಾಗಬೇಕು. ವಿದ್ಯಾರ್ಥಿಗಳು ಪ್ರಾಥಮಿಕ ಶಿಕ್ಷಣದಿಂದಲೇ ಕಂಪ್ಯೂಟರ್ ಶಿಕ್ಷಣ ಪಡೆಯುವಂತಾಗಬೇಕೆಂದು ತಿಳಿಸಿದರು.

ವಿರಾಜಪೇಟೆ ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ಮುಖ್ಯಸ್ಥೆ ಹಾಗೂ ಸಮಾಜ ಸೇವಕರಾದ ಪೂಜಾ ಸಜೇಶ್ ಮಾತನಾಡಿ, ಇನ್ನು ಮುಂದಿನ ದಿನಗಳಲ್ಲಿ ಶಾಲೆಗೆ ಹಾಗೂ ವಿದ್ಯಾರ್ಥಿಗಳ ಕಲಿಕೆಗೆ ಅನುಗುಣವಾಗಿ ಬೇಕಾದ ವ್ಯವಸ್ಥೆಯನ್ನು ಕಲ್ಪಿಸಲು ಸಹಕಾರವನ್ನು ನೀಡಲಾಗುವುದು ಎಂದರು.

ಶಾಲಾ ಮುಖ್ಯಶಿಕ್ಷಕಿ ಕಮಲಮ್ಮ, ಕಲ್ತೊಡು ಕ್ಲಸ್ಟರ್‌ನ ಸಿಆರ್‌ಪಿ ವೆಂಕಟೇಶ್, ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ ಶಿಲ್ಪಾ, ರಾಜಿಕ್, ಎಸ್‌ಡಿಎಂಸಿ ಸದಸ್ಯರು, ಶಿಕ್ಷಕರು ಹಾಗೂ ಮಕ್ಕಳು ಉಪಸ್ಥಿತರಿದ್ದರು.