ಗೋಣಿಕೊಪ್ಪ: ಇಲ್ಲಿನ ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆ ವಾರ್ಷಿಕೋತ್ಸವದ ಅಂಗವಾಗಿ ಸೋಮವಾರ ಕಲಿಕಾ ಹಬ್ಬ ನಡೆಯಿತು.
ವಿದ್ಯಾರ್ಥಿಗಳಿಗೆ ಛದ್ಮವೇಷ, ಜನಪದ, ಗೀತಗಾಯನ, ರಂಗೋಲಿ ಸ್ಪರ್ಧೆ ನಡೆಯಿತು. 1-4ನೇ ತರಗತಿವರೆಗಿನ ವಿದ್ಯಾರ್ಥಿಗಳು ಛದ್ಮವೇಷ ಹಾಗೂ ಜನಪದ ಗೀತ ಗಾಯನ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. 5 ರಿಂದ 8 ನೇ ತರಗತಿವರೆಗಿನ ವಿದ್ಯಾರ್ಥಿಗಳು ರಂಗೋಲಿ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು.
ಛದ್ಮವೇಷದಲ್ಲಿ ಪಾಪ್‌ಕಾರ್ನ್, ಸ್ವಾಮಿ ವಿವೇಕಾನಂದ, ಪೊಲೀಸ್ ವೇಷಧಾರಿ, ವಿವಿಧ ಸಮುದಾಯದ ಸಾಂಪ್ರದಾಯಿಕ ಉಡುಪುಗಳಲ್ಲಿ ವಿದ್ಯಾರ್ಥಿಗಳು ಸ್ಪರ್ಧಿಗಳಾಗಿ ಕಂಡು ಬಂದರು. ಮುಖ್ಯ ಶಿಕ್ಷಕ ಎಚ್.ಕೆ.ಕುಮಾರ್ ಇದ್ದರು.