ಹನೂರು: ಸರ್ಕಾರದಿಂದ ದೊರಕುವ ಸವಲತ್ತು ಪಡೆಯಲು ಸಂಘಟಿತರಾಗುವುದು ಅವಶ್ಯಕ ಎಂದು ರೈತ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ತಿಳಿಸಿದರು.
ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಗುರುವಾರ ರೈತ ಹಾಗೂ ಹಸಿರು ಸೇನೆ ಗ್ರಾಮ ಘಟಕವನ್ನು ಉದ್ಘಾಟಿಸಿ ಮಾತನಾಡಿದ ಅವರು, ರೈತ ದೇಶದ ಬೆನ್ನೆಲುಬು. ಆದರೆ ಸರ್ಕಾರ ಕೃಷಿಗೆ ಅನುಕೂಲವಾಗುವಂತೆ ಸಮರ್ಪಕವಾಗಿ ಸವಲತ್ತುಗಳನ್ನು ಒದಗಿಸುತ್ತಿಲ್ಲ. ಇತ್ತ ಬೆಳೆ ಹಾನಿಗಳಿಂದ ಸಂಕಷ್ಟ ಎದುರಿಸುವಂತಾಗಿದೆ. ಇದರಿಂದ ಕೃಷಿಯಲ್ಲಿ ನಷ್ಟ ಅನುಭವಿಸುವಂತಾಗಿದೆ ಎಂದರು.
ಸರ್ಕಾರಿ ಕಚೇರಿಗಳಲ್ಲಿ ರೈತರ ಕೆಲಸ ಕಾರ್ಯಗಳು ವಿಳಂಬ ಗತಿಯಲ್ಲಿ ಸಾಗುತ್ತಿದೆ. ಇನ್ನು ಕೆಲವು ಗ್ರಾಮಗಳಲ್ಲಿ ಮೂಲ ಸೌಕರ್ಯ ಮರೀಚಿಕೆಯಾಗಿದೆ. ಈ ದಿಸೆಯಲ್ಲಿ ಹೋರಾಟ ಅನಿವಾರ್ಯವಾಗಿದ್ದು, ಸಂಘಟಿತರಾಗಿ ಸರ್ಕಾರಿ ಸವಲತ್ತುಗಳನ್ನು ಪಡೆದುಕೊಳ್ಳಬೇಕಿದೆ ಎಂದು ತಿಳಿಸಿದರು.
ಸಂಘದ ಕಾರ್ಯದರ್ಶಿ ಶಿವಕುಮಾರ್, ತಾಲೂಕು ಅಧ್ಯಕ್ಷ ಚಂಗಡಿ ಕರಿಯಪ್ಪ, ಕೌದಳ್ಳಿ ಗ್ರಾಮ ಘಟಕ ಅಧ್ಯಕ್ಷ ಮುತ್ತಪ್ಪ, ಎಂ.ದೊಡ್ಡಿಯ ಆರೋಗ್ಯರಾಜು, ಸದಸ್ಯ ಸುಂದರ್‌ರಾಜು ಇದ್ದರು.