ಜಿಲ್ಲೆ

ಸರ್ಕಾರಿ ಸೌಲಭ್ಯಗಳನ್ನು ಸದುಪಯೋಗಿಸಿಕೊಳ್ಳಿ

ರಾವಂದೂರು: ಸರ್ಕಾರಿ ಸೌಲಭ್ಯಗಳನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕೆಂದು ಉಪ ತಹಸೀಲ್ದಾರ್ ಕೆ.ಶುಭಾ ಸಲಹೆ ನೀಡಿದರು.

ಪಿರಿಯಾಪಟ್ಟಣ ತಾಲೂಕು ರಾವಂದೂರು ಹೋಬಳಿ ಆಡಳಿತ ಕೇಂದ್ರದಲ್ಲಿ ಏರ್ಪಡಿಸಿದ್ದ ಪಿಂಚಣಿ ಅದಾಲತ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಾರ್ವಜನಿಕರಿಗೆ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು, ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಹಾಗೂ ಯಾವುದೇ ಗ್ರಾಮಾಧಿಕಾರಿಗಳು ತಮ್ಮಲ್ಲಿಗೆ ಬಂದ ಅರ್ಜಿಗಳನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು ಅವರಿಗೆ ಸೂಕ್ತ ಪರಿಹಾರ ನೀಡಬೇಕು ಯಾವುದೇ ಕಾರಣಕ್ಕೂ ಅವರನ್ನು ಅಲೆದಾಡಿಸುವ ಪರಿಸ್ಥಿತಿ ನಿರ್ಮಾಣವಾಗಬಾರದು ಎಂದು ತಿಳಿಸಿದರು.

ಸಂಧ್ಯಾ ಸುರಕ್ಷಾ, ಇಂದಿರಾ ಗಾಂಧಿ ವೃದ್ಧಾಪ್ಯ ವೇತನ, ವಿಧವಾ ವೇತನ, ಅಂಗವಿಕಲ ವೇತನ, ಮನಸ್ವಿನಿ, ವಿಧವಾ ವೇತನ ಇನ್ನು ಮುಂತಾದ ಸರ್ಕಾರಿ ಸೌಲಭ್ಯಗಳಿಗೆ ಅರ್ಜಿ ಹಾಕಿದ್ದ 25ಕ್ಕೂ ಹೆಚ್ಚು ಜನರಿಗೆ ಮಂಜೂರಾತಿ ಪತ್ರವನ್ನು ಇದೇ ಸಂದರ್ಭದಲ್ಲಿ ವಿತರಿಸಲಾಯಿತು.

ಸ್ಥಳದಲ್ಲೇ 20ಕ್ಕೂ ಹೆಚ್ಚು ಹೊಸ ಅರ್ಜಿಗಳನ್ನು ಸ್ವೀಕರಿಸಿ ಅವರಿಗೂ ಅತಿ ಶೀಘ್ರದಲ್ಲೇ ಮಂಜೂರಾತಿ ಪತ್ರವನ್ನು ವಿತರಿಸಲಾಗುವುದು ಎಂದು ಉಪ ತಹಸೀಲ್ದಾರ್ ಕೆ.ಶುಭಾ ತಿಳಿಸಿದರು.

ಮಕೋಡು ಗ್ರಾಪಂ ಮಾಜಿ ಅಧ್ಯಕ್ಷ ಕೃಷ್ಣೇಗೌಡ, ಗ್ರಾಮಾಧಿಕಾರಿಗಳಾದ ನಾಗೇಂದ್ರ, ಕಲ್ಪನಾ, ನಜ್ಮಾ, ಸುನಿಲ್, ದರ್ಶನ್, ಮನು, ಪರಶುರಾಮ್, ಸಿಬ್ಬಂದಿ ಸ್ವಾಮಿ, ಕುಮಾರ್, ಚಂದ್ರ ಮತ್ತಿತರರು ಹಾಜರಿದ್ದರು.