ಪಿ.ಎಚ್.‌ಪೂಜಾರ್  
ಜಿಲ್ಲೆ

ಸರ್ವ ಕ್ಷೇತ್ರಗಳ ಅಭಿವೃದ್ಧಿ ಪರ ಬಜೆಟ್

ಬಾಗಲಕೋಟೆ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್ ವಿಕಸಿತ ಭಾರತದ ದಿಕ್ಸೂಚಿಯಾಗಿದೆ ಎಂದು ಮೇಲ್ಮನೆ ಸದಸ್ಯ
ಪಿ.ಎಚ್.‌ಪೂಜಾರ್ ತಿಳಿಸಿದ್ದಾರೆ.

ಕೇಂದ್ರದ ಬಜೆಟ್ ಕುರಿತು ಪ್ರತಿಕ್ರಿಯಿಸಿರುವ ಅವರು, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸತತ 7ನೇ ಬಾರಿಗೆ ಬಜೆಟ್ ಮಂಡಿಸುವ ಮೂಲಕ ದಾಖಲೆ ಬರೆದಿದ್ದಾರೆ. ಪ್ರಧಾನಿ ನರೆಂದ್ರ ಮೋದಿ ಅವರ ನೇತೃತ್ವದ 3.0 ವಿಕಸಿತ ಭಾರತ ಬಜೆಟ್ 2024-25 ರಲ್ಲಿ ರೈತರು, ಬಡವರ ಹಾಗೂ ಮಹಿಳೆಯರು ಸೇರಿದಂತೆ ಎಲ್ಲ ಕ್ಷೇತ್ರಗಳಿಗೆ ಆದ್ಯತೆ ನೀಡಿದ್ದಾರೆಂದು ತಿಳಿಸಿದ್ದಾರೆ.