ಜಿಲ್ಲೆ

ಸರ್ವೋತ್ತಮ ಸೇವಾ ಪ್ರಶಸ್ತಿಗೆ ಸೋನಿಯಾ ಭಾಜನ

ಚಿತ್ರದುರ್ಗ: ಬೆಂಗಳೂರಿನ ವಿಧಾನಸೌಧದಲ್ಲಿ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಅಂಗವಾಗಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಚಿತ್ರದುರ್ಗ ಡಿವೈಎಸ್ಪಿ ದಿನಕರ್ ಅವರ ಪತ್ನಿ ಸೋನಿಯಾ ವೆರ್ಣೇಕರ್ ಅವರು 2023ನೇ ಸಾಲಿನ ರಾಜ್ಯಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಭಾಜನರಾದರು.

ರಾಜ್ಯ ಸರ್ಕಾರ ವಿವಿಧ ಇಲಾಖೆಗಳಲ್ಲಿ ವಿಶೇಷ ಸಾಧನೆಗೈದ ಅಧಿಕಾರಿಗಳಿಗೆ ಈ ಪ್ರಶಸ್ತಿ ನೀಡುತ್ತಿದ್ದು, ಕೋಲಾರ ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಯಾಗಿದ್ದ ವೇಳೆ ಸಲ್ಲಿಸಿದ ಸೇವೆ ಪರಿಗಣಿಸಿ ಪ್ರಶಸ್ತಿ ನೀಡಿದೆ. ಸೋನಿಯಾ ಅವರು ತುಮಕೂರು ಜಿಲ್ಲೆಯಲ್ಲೂ ಸದ್ಯ ಇದೇ ಹುದ್ದೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.