ಜಿಲ್ಲೆ

ಸವಲತ್ತು ಸದ್ಬಳಕೆ ಮಾಡಿಕೊಳ್ಳಿ

ಗುಂಡ್ಲುಪೇಟೆ: ಸರ್ಕಾರ ವತಿಯಿಂದ ದೊರಕುವ ವಿವಿಧ ಸವಲತ್ತುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಶಾಸಕ ಸಿ.ಎಸ್. ನಿರಂಜನಕುಮಾರ್ ಹೇಳಿದರು.
ಪಟ್ಟಣದ ಪ್ರವಾಸಿಮಂದಿರದಲ್ಲಿ ಕಾರ್ಮಿಕ ಇಲಾಖೆಯ ವತಿಯಿಂದ ಮಹಿಳಾ ಕಾರ್ಮಿಕರಿಗೆ ಪೌಷ್ಟಿಕ ಆಹಾರ ಕಿಟ್ ವಿತರಿಸಿ ಅವರು ಮಾತನಾಡಿದರು. ಮಹಿಳಾ ಕಾರ್ಮಿಕರಿಗೆ ಪೋಷಕಾಂಶಗಳ ಕೊರತೆಯಿಂದ ಹಲವಾರು ಆರೋಗ್ಯದ ಸಮಸ್ಯೆಗಳನ್ನು ಎದುರಿಸುವಂತಾಗಿದೆ. ಆದ್ದರಿಂದ ಕಾರ್ಮಿಕ ಇಲಾಖೆಯು ನೋಂದಾಯಿತ ಮಹಿಳಾ ಕಾರ್ಮಿಕರಿಗೆ ಪೌಷ್ಟಿಕ ಆಹಾರ ವಿತರಿಸುವ ವ್ಯವಸ್ಥೆ ಮಾಡಿದೆ ಎಂದು ನಿರಂಜನಕುಮಾರ್ ಹೇಳಿದರು.ಈ ಸಂದರ್ಭ ತಹಸೀಲ್ದಾರ್ ರವಿಶಂಕರ್, ತಾಪಂ ಇಒ ಅರಸು, ಕಾರ್ಮಿಕ ಇಲಾಖೆಯ ಅಧಿಕಾರಿಗಳು ಇದ್ದರು.