ಹಾಸನ: ಸವಿತಾ ಮಹರ್ಷಿ ಅವರ ಜೀವನಶೈಲಿ ಎಲ್ಲರಿಗೂ ಮಾದರಿ ಅವರ ತತ್ವ, ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆಯುತ್ತಾ ಸದೃಢ ಭಾರತವನ್ನು ನಿರ್ಮಿಸೋಣ ಎಂದು ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಈ.ಕೃಷ್ಣೇಗೌಡ ಕೆರೆ ನೀಡಿದರು.
ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಶುಕ್ರವಾರ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಏರ್ಪಡಿಸಿದ್ದ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಆರ್ಥಿಕ, ಸಾಮಾಜಿಕ, ರಾಜಕೀಯ ಹಾಗೂ ಶೈಕ್ಷಣಿಕವಾಗಿ ಸವಿತಾ ಮಹರ್ಷಿ ಕ್ಷೌರಿಕ ಸಮಾಜದ ಮೂಲ ಪುರುಷರಾಗಿದ್ದರು ಅವರ ಕಾಯಕ, ವೇದ ಉಪನಿಷತ್ತುಗಳು, ವೈದ್ಯ, ಜೋತಿಷ್ಯ, ಮಂಗಳ ವಾದ್ಯ, ಇವುಗಳೆಲ್ಲಾ ಅವರ ಕಸುಬುಗಳು ಆಗಿದ್ದವು ಎಂದು ತಿಳಿಸಿದರು.
ಸಮುದಾಯದ ಮುಖಂಡ ಕೆ.ವಿ ಮೋಹನ್ ಅವರು ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿ ಮಾತನಾಡಿದ ಅವರು, ಪುರಾಣ ಗ್ರಂಥಗಳ ಪ್ರಕಾರ ಸವಿತಾ ಮಹರ್ಷಿ ದೇವ ದೇವತೆಗಳ ಆಯುಷ್ಕರ್ಮ ಸೇವೆಯನ್ನು ಮಾಡುತ್ತಿದ್ದಾರೆಂದು ಕಾಶಿ ಕ್ಷೇತ್ರದಲ್ಲಿ ದೊರೆತ ಮಹಾಗ್ರಂಥದಲ್ಲಿ ಉಲ್ಲೇಖಿಸಲಾಗಿದೆ ಅಪಾರ ಜ್ಞಾನಭಂಡಾರ ಹೊಂದಿದ್ದ ಸವಿತಾ ಮಹರ್ಷಿಗಳು ನಾಲ್ಕನೇ ವೇದವಾದ ಸಾಮವೇದ ಕೃತಿ ರಚಿಸಿದ್ದಾರೆ ಎಂದರು.
ಸವಿತಾ ಸಮಾಜ ಒಗ್ಗಟ್ಟಾಗಿ ಶೈಕ್ಷಣಿಕವಾಗಿ, ಆರ್ಥಿವಾಗಿ, ಸಾಮಾಜಿಕವಾಗಿ ಇತರರಿಗೆ ಆದರ್ಶ ಪ್ರಾಯರಾಗಿ ಬೆಳೆಯಬೇಕು. ತತ್ವ ಸಂದೇಶಗಳನ್ನು ಸರ್ವಕಾಲಿಕವಾಗಿದ್ದು ಅದರ ಹಲವು ಭಾಗವನ್ನಾದರೂ ಜನರು ಜೀವನದಲ್ಲಿ ಅಳವಡಿಸಿಕೊಂಡಾಗ ಉತ್ತಮ ಸಮಾಜ ನಿರ್ಮಾಣದೊಂದಿಗೆ ಸದೃಢ ಭಾರತ ಹೊರಹೊಮ್ಮಲು ಸಾಧ್ಯವಿದೆ ಎಂದು ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಹಾಯಕ ಎಲ್.ಎಸ್.ರಮೇಶ್ ಅವರು ಕಾರ್ಯಕ್ರಮದಲ್ಲಿ ಮಾತನಾಡಿ, ಮಹರ್ಷಿಯವರು ಯಾವುದೇ ವೃತ್ತಿಯನ್ನು ನಿರ್ವಹಿಸಿದರು ಆ ವೃತ್ತಿಯನ್ನು ಗೌರವಿಸುತ್ತಿದರು, ವೃತ್ತಿಯನ್ನು ಗೌರವಿಸಿ ಸಮಾಜದ ಅಭಿವೃದ್ದಿಗೆ ಎಲ್ಲರೂ ಒಗ್ಗಟಿನಿಂದ ಸೇರಿ ಮುಂದುವರೆಯಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸವಿತಾ ಸಮಾಜ ಅಧ್ಯಕ್ಷ ರವಿಕುಮಾರ್, ಸವಿತಾ ಸಮಾಜ ತಾಲ್ಲೂಕು ಅಧ್ಯಕ್ಷ ಜಿ.ವೆಂಕಟೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಎಚ್.ಪಿ. ತಾರಾನಾಥ್, ವಿವಿಧ ಸಂಘ ಸಂಸ್ಥೆಗಳ ಮುಖಂಡರುಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.